ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಲಬರ್ಗಾ ‌ವಿಶ್ವವಿದ್ಯಾಲಯದ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್ ‌ಪ್ರದಾನ

Published 19 ಜೂನ್ 2023, 6:45 IST
Last Updated 19 ಜೂನ್ 2023, 6:45 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಗುಲಬರ್ಗಾ ‌ವಿಶ್ವವಿದ್ಯಾಲಯದ ಡಾ.ಅಂಬೇಡ್ಕರ್ ಸಭಾಂಗಣದಲ್ಲಿ ಸೋಮವಾರ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ‌ಥಾವರಚಂದ್ ಗೆಹಲೋತ್ ಅವರು ಮೂವರು ಗಣ್ಯರಿಗೆ ಗೌರವ ‌ಡಾಕ್ಟರೇಟ್ ಪ್ರದಾನ ಮಾಡಿದರು.

ಕಲಬುರಗಿಯ ಶಿಲ್ಪಕಲಾವಿದರೂ, ಅಯೋಧ್ಯೆ ರಾಮಮಂದಿರ ಮೂರ್ತಿ ಪ್ರತಿಷ್ಠಾಪನೆ ಸಲಹಾ ಸಮಿತಿ ಸದಸ್ಯ ಮಾನಯ್ಯ ಬಡಿಗೇರ, ಬೀದರ್ ಜಿಲ್ಲೆ‌ಯ ಶಿಕ್ಷಣ ತಜ್ಞ ತಾತ್ಯಾರಾವ್ ಕಾಂಬಳೆ ಹಾಗೂ ವಿಜ್ಞಾನ ‌ಕ್ಷೇತ್ರದಲ್ಲಿ ಬೆಂಗಳೂರಿನ ಡಿ.ಎನ್. ಅವರು ‌ಗೌರವ ಡಾಕ್ಟರೇಟ್ ಸ್ವೀಕರಿಸಿದರು.

ಸಮ ಕುಲಪತಿಯೂ ಆದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ. ದಯಾನಂದ ಅಗಸರ, ಕುಲಸಚಿವ ಶರಣಪ್ಪ ಸತ್ಯಂಪೇಟೆ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ ವೇದಿಕೆಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT