ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿನಿಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಭೌತಶಾಸ್ತ್ರ ವಿಭಾಗದಲ್ಲಿ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದ ವಿಜಯಕುಮಾರ್ ಕಡಗಂಚಿ ಎಂಬ ಹೊರಗುತ್ತಿಗೆ ಸಿಬ್ಬಂದಿಯನ್ನು ವಿಶ್ವವಿದ್ಯಾಲಯವು ಸೇವೆಯಿಂದ ವಜಾ ಮಾಡಿದೆ.

‘ಕಳೆದ ಒಂದು ವರ್ಷದಿಂದ ಆರೋಪಿ ವಿಜಯಕುಮಾರ್ ನನ್ನ ಬಳಿ ಬಂದು ಮೈಗೆ ತಾಗಿಕೊಂಡು ನಿಲ್ಲುವುದು, ನನ್ನ ದೇಹದ ಬಗ್ಗೆ ಮಾತನಾಡುವುದು ಮಾಡುತ್ತಿದ್ದ. ನನಗೆ ಗೊತ್ತಿಲ್ಲದಂತೆ ವಿಡಿಯೊ ಮಾಡಿ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ತನ್ನ ಗಮನಕ್ಕೆ ತಂದ ಬಳಿಕವೇ ತರಗತಿಯಿಂದ ಹೊರಗೆ ಹೋಗಬೇಕು ಎಂದು ತಾಕೀತು ಮಾಡುತ್ತಿದ್ದ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದೆ’ ಎಂದು ವಿದ್ಯಾರ್ಥಿನಿ ಕುಲಸಚಿವರಿಗೆ ನೀಡಿದ ಲಿಖಿತ ದೂರಿನಲ್ಲಿ ತಿಳಿಸಿದ್ದರು.

‘ವಿಜಯಕುಮಾರ್ ತನಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಬಗ್ಗೆ ವಿಭಾಗ ಮುಖ್ಯಸ್ಥರ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ’ ಎಂದೂ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.

ದೂರನ್ನು ಗಂಭೀರವಾಗಿ ಪರಿಗಣಿಸಿದ ಕುಲಸಚಿವ ಪ್ರೊ.ರಮೇಶ ಲಂಡನಕರ್ ಅವರು ವಿಜಯಕುಮಾರನನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದರು. ಅಲ್ಲದೇ, ವಿಭಾಗದ ಸಿಬ್ಬಂದಿ ವಿರುದ್ಧ ದುರ್ನಡತೆಯ ದೂರು ಬಂದರೂ ಕ್ರಮ ಏಕೆ ಕೈಗೊಂಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಬಸವರಾಜ ಸಣ್ಣಕ್ಕಿ ಅವರಿಗೆ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.