ಕಲಬುರಗಿ: ‘ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರ ಮತ್ತು ಯುವಕರ ಸಬಲೀಕಣಕ್ಕೆ ಪೂರಕವಾಗಿವೆ. ಯುವನಿಧಿ ಯೋಜನೆ ಪರಿಣಾಮ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಶೇ 4.80ರಿಂದ ಶೇ 2.25ಕ್ಕೆ ಇಳಿದೆ’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್. ಆರ್. ಮೆಹರೋಜ್ ಖಾನ್ ಹೇಳಿದರು.

ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಬುಧವಾರ ಯುವನಿಧಿ ಫಲಾನುಭವಿಗಳ ಸಂವಾದದಲ್ಲಿ ಅವರು ಮಾತನಾಡಿದರು.

‘ಶಕ್ತಿ ಯೋಜನೆ ಮಹಿಳೆಯರ ವೃತ್ತಿ ಬದುಕಿಗೆ ಆಸರೆಯಾಗಿದೆ. ಶಕ್ತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳಿಂದ ರಾಜ್ಯದಲ್ಲಿ ಮಹಿಳೆಯರ ಉದ್ಯಮಶೀಲತೆ ಪ್ರಮಾಣ ಶೇ 12ಕ್ಕೆ ಏರಿದೆ. ಅನ್ನ ಭಾಗ್ಯ ಯೋಜನೆಯಿಂದ ಹಸಿವು ದೂರಾಗಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದು ರೂಪಾಯಿ ಭ್ರಷ್ಟಾಚಾರವಿಲ್ಲ’ ಎಂದರು.

‘ಯುವನಿಧಿ ಯೋಜನೆಯಡಿ ತಾಂತ್ರಿಕ ಸಮಸ್ಯೆಯಿಂದ ಹಣ ಬಾರದೆ ಇದ್ದರೆ ಟೋಲ್ ಫ್ರೀ ನಂಬರ್ 1800 5997154ಗೆ ಕರೆ ಮಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು’ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ‘ವಿದ್ಯಾರ್ಥಿಗಳು ಓದಿನ ಜತೆಗೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದಲ್ಲಿ ಜೀವನದಲ್ಲಿ ಯಶಸ್ಸು ಸಾಧ್ಯ. ವಿವಿಯ ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಅಭಿಪ್ರಾಯ ಹಂಚಿಕೊಂಡ ವಿದ್ಯಾರ್ಥಿನಿ ವಿಜಯಲಕ್ಷ್ಮಿ, ‘ನಿರುದ್ಯೋಗದಿಂದ ಮುಕ್ತವಾಗಲು ಯುವನಿಧಿ ಸಹಾಯವಾಗಿದೆ. ತಂದೆ ಒಕ್ಕಲುತನ ಮಾಡುತ್ತಿದ್ದು, ಅರ್ಥಿಕವಾಗಿ ನಾವು ಸಬಲರಲ್ಲ. ಯುವನಿಧಿ ಹಣದಿಂದ ಸಹೋದರನೊಂದಿಗೆ ಸೇರಿ ಧಾರವಾಡದಲ್ಲಿ ಉದ್ಯೋಗದ ತರಬೇತಿ ಪಡೆಯುತ್ತಿದ್ದೇನೆ’ ಎಂದು ಹೇಳಿದರು.

ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರಮೇಶ ಲಂಡನಕರ್, ಯುವನಿಧಿ ಸಂಯೋಜಕ ಪ್ರಕಾಶ ಕರೇಜನ್ ಸೇರಿದಂತೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಮುಖರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.