ಸೋಮವಾರ, ಸೆಪ್ಟೆಂಬರ್ 20, 2021
29 °C

ಗುವಿವಿ: ಕೆಲ ವಿಷಯಗಳ ಪರೀಕ್ಷೆ ಮುಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ರಾಜ್ಯ ಸರ್ಕಾರ ವಾರಾಂತ್ಯ ಲಾಕ್‌ಡೌನ್ ಘೋಷಣೆ ಮಾಡಿದ ಕಾರಣ ಗುಲಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವ ಸೋನಾರ್‌ ನಂದಪ್ಪ ಡಿ. ತಿಳಿಸಿದ್ದಾರೆ.

ಈ ಪ್ರಕಾರ ಆಗಸ್ಟ್‌ 7, 8 ಹಾಗೂ 14ರಂದು ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಈ ಪರೀಕ್ಷೆಗಳನ್ನು ಕೊನೆಯ ಪರೀಕ್ಷೆ ಮುಗಿದ ಬಳಿಕ ಅಂದರೆ; ಆಗಸ್ಟ್‌ 27ರ ನಂತರ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ರದ್ದುಮಾಡಲಾದ ಪರೀಕ್ಷೆಗಳ ದಿನಾಂಕವನ್ನು ನಂತರ ತಿಳಿಸಲಾಗುವುದು. ಇವುಗಳನ್ನು ಹೊರತುಪಡಿಸಿ ಉಳಿದೆಲ್ಲ ಪರೀಕ್ಷೆಗಳೂ ಈ ಹಿಂದೆ ನಿಗದಿ ಮಾಡಿದ ವೇಳಾಪಟ್ಟಿಯಂತೆಯೇ ನಡೆಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.