ಸೇಡಂ: ತಾಲ್ಲೂಕಿನ ವಿವಿಧೆಡೆ ನಕಲಿ ವೈದ್ಯರ ಕ್ಲಿನಿಕ್ ಮೇಲೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವಕುಮಾರ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಮೂವರು ನಕಲಿ ವೈದ್ಯರ ಕ್ಲಿನಿಕ್ಗಳನ್ನು ಬಂದ್ ಮಾಡಲಾಗಿದೆ.

ತಾಲ್ಲೂಕಿನ ಮಳಖೇಡ ಪೊಲೀಸ್ ಠಾಣೆಯ ಎದುರುಗಡೆ ಇರುವ ಸೈಯದ್ ಶಕೀಲ್ ಕ್ಲಿನಿಕ್, ಸ್ಟೇಷನ್ ತಾಂಡಾಗಳಲ್ಲಿನ ಮಹ್ಮದ್ ಮೌಲಾನಾ ಮತ್ತು ಆರುಣ ಟೀಕೇದಾರ ಕ್ಲಿನಿಕ್ ಮೇಲೆ ದಾಳಿ ನಡೆಸಲಾಗಿದೆ.

‘ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗುತ್ತಿದೆ. ಸೇಡಂ ತಾಲ್ಲೂಕಿನಲ್ಲಿ ಬುಧವಾರ ವಿವಿಧೆಡೆ ದಾಳಿ ನಡೆಸಿದ್ದು, ಮಳಖೇಡ ಮತ್ತು ಸ್ಟೇಷನ್ ತಾಂಡಾದಲ್ಲಿ ನಕಲಿ ವೈದ್ಯರನ್ನು ಪತ್ತೆ ಹಚ್ಚಲಾಗಿದೆ. ಸ್ಥಳಕ್ಕೆ ನಾವು ಭೇಟಿ ನೀಡಿ ಪರಿಶೀಲಿಸಲಾಯಿತು. ಅವರ ಬಳಿ ವೈದ್ಯಕೀಯ ಚಿಕಿತ್ಸೆಗೆ ಬೇಕಾದ ಯಾವುದೇ ವಿದ್ಯಾರ್ಹತೆ ಇರದ ಕಾರಣ ಕ್ಲಿನಿಕ್ ಬೀಗ ಹಾಕಲಾಗಿದೆ. ಇನ್ನೋರ್ವರಿಗೆ ನೋಟೀಸ್ ನೀಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವಕುಮಾರ ಪಾಟೀಲ ಪ್ರಜಾವಾಣಿಗೆ ಮಾಹಿತಿ ನೀಡಿದರು.

ಡಾ.ವೇಣಗೋಪಾಲರೆಡ್ಡಿ, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಯೋಗಿ ಸಕ್ಪಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.