ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕದಲ್ಲಿ ಮುಂದಿನ 48 ಗಂಟೆ ಬಿಸಿಗಾಳಿ ಅಲೆ

Published 14 ಮಾರ್ಚ್ 2024, 15:05 IST
Last Updated 14 ಮಾರ್ಚ್ 2024, 15:05 IST
ಅಕ್ಷರ ಗಾತ್ರ

ಕಲಬುರಗಿ: ತಾಪಮಾನ ಏರಿಕೆಯಾಗಿದ್ದರಿಂದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಮಧ್ಯ ಕರ್ನಾಟಕದ ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮೂನ್ಸೂಚನೆ ನೀಡಿದೆ.

ಬೇಸಿಗೆಯ ಆರಂಭದಲ್ಲೇ ಬಿಸಿಲ ಧಗೆ ಹೆಚ್ಚುತ್ತಿದ್ದು, ವಾತಾವರಣದಲ್ಲಿ ಆಗಿರುವ ಬದಲಾವಣೆಯಿಂದ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಅತ್ಯಧಿಕ ತಾಪಮಾನ, ಬಿಸಿಗಾಳಿ ಪರಿಸ್ಥಿತಿ ಕಂಡುಬರುವ ಸಾಧ್ಯತೆಗಳಿವೆ. 40ರಿಂದ 44 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿ ಉಷ್ಣಾಂಶ ದಾಖಲಾಗಬಹುದು ಎಂದು ಎಚ್ಚರಿಸಿದೆ.

ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 38ರಿಂದ 40 ಡಿಗ್ರಿ ಸೆಲ್ಸಿಯಸ್‌ ನಡುವೆ ಉಷ್ಣಾಂಶ ಕಂಡುಬರುವ ಸಾಧ್ಯತೆ ಇದೆ.

ಸೂರ್ಯನ ಶಾಖ ಹೆಚ್ಚಾಗುವ ಹಿನ್ನೆಲೆಯಲ್ಲಿ ಬಿಸಿಲಿನಲ್ಲಿ ಓಡಾಡಿದರೆ ಹೀಟ್‌ ವೇವ್ ಸ್ಟ್ರೋಕ್‌ (ಶಾಖದ ಹೊಡೆತ) ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ಸಾರ್ವಜನಿಕರು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಓಡಾಡುವುದನ್ನು ಕಡಿಮೆ ಮಾಡಬೇಕು. ಬಿಸಿಲಿನಲ್ಲಿ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ಹೆಚ್ಚು ನೀರು ಕುಡಿದು, ಸೂರ್ಯನ ನೇರ ಬೆಳಕಿನಿಂದ ದೂರ ಇರಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT