ಕಲಬುರಗಿ: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ಮನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೇ 30ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು. ಚಹಾ, ಕಾಫಿ, ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು’ ಎಂದು ಸಲಹೆ ನೀಡಿದ್ದಾರೆ.

ಬೇಸಿಗೆಯ ಝಳ ಹೆಚ್ಚಿರುವುದರಿಂದ ಕಲಬುರಗಿ ಕಂದಾಯ ವಿಭಾಗದಲ್ಲಿ ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ಸರ್ಕಾರಿ ಕಚೇರಿಗಳನ್ನು ತೆರೆಯಲು ಸರ್ಕಾರ ಆದೇಶ ನೀಡಿತ್ತು. ಅದರಂತೆ ತಮಗೂ ಕೆಲಸದಲ್ಲಿ ರಿಯಾಯಿತಿ ನೀಡಬೇಕು ಎಂದು ಉದ್ಯೋಗ ಖಾತ್ರಿಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ ಕೆಲಸದಲ್ಲಿ ರಿಯಾಯಿತಿ ಘೋಷಿಸಲಾಗಿದೆ.

ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಸೌಕರ್ಯಗಳನ್ನು ಒದಗಿಸುವಂತೆ ಸಚಿವ ಪ್ರಿಯಾಂಕ್ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.