ಶನಿವಾರ, ಸೆಪ್ಟೆಂಬರ್ 18, 2021
28 °C

ಕಲಬುರ್ಗಿ: ನಗರದಲ್ಲಿ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ವಾರದಿಂದ ಬಿಡುವು ನೀಡಿದ್ದ ಮಳೆ ಶನಿವಾರ ರಾತ್ರಿ ಧಾರಾಕಾರವಾಗಿ ಸುರಿಯಿತು. ಬಿರುಸಿನಿಂದ ಕೂಡಿದ ಮಳೆ ಹನಿಗಳಿಂದಾಗಿ ಕೆಲವೇ ಹೊತ್ತಿನಲ್ಲಿ ರಸ್ತೆ, ಚರಂಡಿಯಲ್ಲಿ ನೀರು ಹರಿಯಲಾರಂಭಿಸಿತು.

ನಗರದ ಸಾರಿಗೆ ಸದನ, ಹಳೇ ಜೇವರ್ಗಿ ಅಂಡರ್‌ಪಾಸ್, ಕುಸನೂರ ರಸ್ತೆ, ತಾರಫೈಲ್, ಜನತಾ ಕಾಲೊನಿಯ ಹಲವೆಡೆ ನೀರಿನಿಂದಾವೃತವಾಗಿತ್ತು. ಬಿಸಿಲಿನ ತಾಪ ಕಡಿಮೆಯಾಗಿದ್ದರೂ ಧಗೆ ಹೆಚ್ಚಾಗಿತ್ತು. ಕಲಬುರ್ಗಿ ಹೊರವಲಯದ ಗ್ರಾಮಗಳಲ್ಲಿಯೂ ರಾತ್ರಿ ಉತ್ತಮ ಮಳೆ ಸುರಿದಿದೆ.

ಇದೇ 4ರಿಂದ ಆರಂಭವಾದ ಮಳೆ ಸೆ 11ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದು, ಈ ಸಂಬಂಧ ಎಲ್ಲ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಕಂದಾಯ ಇಲಾಖೆಯ ಇತರ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಪ್ರವಾಹ ಉಂಟಾದರೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಕಾಳಜಿ ಕೇಂದ್ರ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಸೂಚನೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.