ಮಂಗಳವಾರ, ಮಾರ್ಚ್ 28, 2023
33 °C
ಬಳವಡ್ಗಿ ಗ್ರಾಮದ ಹಲವು ಮನೆಗಳಿಗೆ ನುಗ್ಗಿದ ನೀರು

ಉಕ್ಕಿ ಹರಿದ ಹಳ್ಳ: ಸಂಪರ್ಕ ಕಡಿತ, ಮನೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಡಿ: ಸೋಮವಾರ ರಾತ್ರಿ ಸುರಿದ ಮಳೆಯಿಂದ ನಾಲವಾರ ವಲಯದ ವಿವಿಧ ಕಡೆ ಹಳ್ಳಗಳು ಉಕ್ಕಿ ಹರಿದಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಡಿದೆ.

ರಾಷ್ಟ್ರೀಯ ಹೆದ್ದಾರಿ– 150ರ ಮೂಲಕ ಹಲಕರ್ಟಿ ಗ್ರಾಮದ ಬಳಿ ಹಾದು ಹೋಗುವ ಹಳ್ಳ ಉಕ್ಕಿ ಹರಿದಿದ್ದರಿಂದ ಸುತ್ತಲಿನ ಸಾವಿರಾರು ಎಕರೆ ಪ್ರದೇಶಕ್ಕೆ ನೀರು ಹೋಗಿ ಅಪಾರ ಪ್ರಮಾಣದ ತೊಗರಿ, ಹತ್ತಿ ಬೆಳೆ ನಷ್ಟವಾಗಿದೆ.

ಕೊಂಚೂರು, ಬಳವಡ್ಗಿ, ಕಡಬೂರು, ದೇವಾಪೂರ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದರಿಂದ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದ ನೂರಾರು ಜನರ ಪರದಾಟಕ್ಕೆ ಕಾರಣವಾಯಿತು.

ಬಳವಡ್ಗಿ ಗ್ರಾಮದ ಹಲವು ಬಡಾವಣೆಗಳು ಹಾಗೂ ಮನೆಗಳಿಗೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ದವಸ ದಾನ್ಯಗಳು ಹಾಳಾದ ವರದಿಯಾಗಿದೆ. ನೀರು ನುಗ್ಗಿದ್ದರಿಂದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ಮನೆಗಳಿಗೆ ನುಗ್ಗಿ ಮಳೆ ನೀರನ್ನು ಹೊರಹಾಕಲು ಬಳವಡ್ಗಿಯ ಏಲಾಂಬಿಕಾ ದೇವಸ್ಥಾನದ ಸುತ್ತಲೂ ಮಳೆ ನೀರು ನಿಂತಿದೆ.

ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾತ್ರಿ ಸುರಿದ ಮಳೆಯಿಂದ ಸನ್ನತ್ತಿ ಗ್ರಾಮದಲ್ಲಿ 3 ಮನೆಗಳು ನೆಲಕ್ಕುರುಳಿವೆ ಎಂದು ಕಂದಾಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.