ಸೋಮವಾರ, ಆಗಸ್ಟ್ 8, 2022
23 °C

ಅತಿವೃಷ್ಠಿ ಹಾನಿ: ಎಕರೆಗೆ ₹ 20 ಸಾವಿರ ಪರಿಹಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ಸತತ ಮಳೆಯಿಂದ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಹೆಸರು, ಉದ್ದು, ಸೋಯಾಬಿನ್ ಬೆಳೆ ಹಾನಿಯಾಗಿದೆ. ಕೂಡಲೇ ಪ್ರತಿ ಎಕರೆಗೆ ₹ 20 ಸಾವಿರ ಪರಿಹಾರ ಘೋಷಿಸಬೇಕು ಎಂದು ಕಲ್ಯಾಣ ಕರ್ನಾಟಕ ರೈತ ಪರ ಸಂಘದ ಕಾರ್ಯದರ್ಶಿ ಬಿ.ಬಿ.ನಾಯಕ ಒತ್ತಾಯಿಸಿದರು.

‘ರೈತರು ಸಂಕಷ್ಟಕ್ಕೆ ಸಿಲುಕಿದ ಕಾರಣ ಆದಷ್ಟು ಬೇಗ ಹೆಸರು, ಉದ್ದು ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು. ಪರಿಹಾರ ನೀಡುವುದಕ್ಕೂ ಮುನ್ನ ಎಲ್ಲ ಹೆಸರು ಖರೀದಿ ಮಾಡಬೇಕು’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.‌

‘₹ 15 ಇದ್ದ ಪಹಣಿಯನ್ನು ₹ 5ಕ್ಕೆ ಮಾತ್ರ ನೀಡುವ ವ್ಯವಸ್ಥೆ ಮಾಡಬೇಕು. ₹ 2,000 ಮಾಸಾಶನ ಕೊಡಬೇಕು. ನಗರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಇರುವುದರಿಂದ ಪ್ರತಿವರ್ಷ ಕೃಷಿ ಮೇಳ ಏರ್ಪಡಿಸಬೇಕು. ರೋಗ, ಕೀಟಬಾಧೆ ಮುಂತಾದ ಕಾರಣಗಳಿಂದ ಹಾಳಾದ ಬೆಳೆ ಸಮೀಕ್ಷೆ ಮಾಡಿ, ನಷ್ಟ ಆಗಿರುವ ರೈತರಿಗೆ ಪರಿಹಾರ ನೀಡಬೇಕು. ಪ್ರತಿದಿನ ಒಂದಲ್ಲ  ಇಂದು ಕಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಕೂಡಲೇ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಉಪಾಧ್ಯಕ್ಷ ಬಸವರಾಜ ಸಾವಳಗಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಗದೇವಿ ಚವ್ಹಾಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು