ಶುಕ್ರವಾರ, ಆಗಸ್ಟ್ 12, 2022
27 °C

ಮಳಖೇಡ ಸೇತುವೆ ಮೇಲೆ‌ ಸಂಚಾರ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದಿಂದ ಸೇಡಂ, ಗುರುಮಠಕಲ್ ಹಾಗೂ ಹೈದರಾಬಾದ್ ಗೆ ತೆರಳುವ ಮಾರ್ಗದಲ್ಲಿ ಬರುವ ಮಳಖೇಡ ಸೇತುವೆಯನ್ನು ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ರಾತ್ರಿ ಬಂದ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನ ಜಾವದವರೆಗೆ ಭಾರಿ ಮಳೆಯಾಗಿದ್ದರಿಂದ ಮಳಖೇಡ ಬಳಿ ಹರಿಯುವ ಕಾಗಿಣಾ ನದಿ ತುಂಬಿ ಹರಿಯುತ್ತಿದೆ. ಯಾವುದೇ ಕ್ಷಣದಲ್ಲಿ ನೀರು ಸೇತುವೆ ಮೇಲೆ ಬರುವ ಸಂಭವವಿದೆ. ಹೀಗಾಗಿ ಸೇತುವೆಯ ಮೇಲಿನಿಂದ ಸಾರ್ವಜನಿಕ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು‌ ಮಲಖೇಡ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.