ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಪುರ | ಬಿರುಗಾಳಿ ಮಳೆ: ಮರ ಬಿದ್ದು ಮಹಿಳೆ ಬಲಿ

Published 27 ಮೇ 2024, 14:21 IST
Last Updated 27 ಮೇ 2024, 14:21 IST
ಅಕ್ಷರ ಗಾತ್ರ

ನಾರಾಯಣಪುರ: ಭಾನುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಆಲದ ಮರವೊಂದು ಉರುಳಿಬಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಯುಕೆಪಿ ಕ್ಯಾಂಪ್ ಎರಿಯಾದ ಮನೆಗಳ ಆವರಣದ ಆಲದ ಮರವು ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಉರುಳಿ ಗ್ರಾಮದ ಶ್ವೇತಾ ರಾಠೋಡ(21)ಅವರ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ನಾಲತವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಕ್ಯಾಂಪ್ ಪ್ರದೇಶದಲ್ಲಿನ ಆಲದ ಸೇರಿ ಇತರೆ ವಯಸ್ಸಾದ ಬೀಳುವ ಹಂತದಲ್ಲಿರುವ ಮರಗಳನ್ನು ಅರಣ್ಯ ಇಲಾಖೆಯವರು ಗುರುತಿಸಿ, ಕೂಡಲೇ ತೆರವುಗೊಳಿಸಲು ಮುಂದಾಗಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಭಾನುವಾರ ನಾರಾಯಣಪುರ ಗ್ರಾಮದಲ್ಲಿ ಸುಮಾರು 5 ಸೆಂ.ಮೀ.ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಾರಾಯಣಪುರ ಭಾನುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ವಿದ್ಯುತ್‌ ಕಂಬವು ಧರೆಗುರುಳಿರುವುದು
ನಾರಾಯಣಪುರ ಭಾನುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ವಿದ್ಯುತ್‌ ಕಂಬವು ಧರೆಗುರುಳಿರುವುದು
ನಾರಾಯಣಪುರ ಸಮೀಪದ ಜೊಗೊಂಡಬಾವಿ ಗ್ರಾಮದಲ್ಲಿ ಭಾನುವಾರ ಸುರಿದ ಬಿರುಗಾಳಿ ಮಳೆಗೆ ವಿದ್ಯುತ್ ಕಂಬ ಮುರಿದು ರಸ್ತೆ ಬಿದ್ದಿರುವುದು
ನಾರಾಯಣಪುರ ಸಮೀಪದ ಜೊಗೊಂಡಬಾವಿ ಗ್ರಾಮದಲ್ಲಿ ಭಾನುವಾರ ಸುರಿದ ಬಿರುಗಾಳಿ ಮಳೆಗೆ ವಿದ್ಯುತ್ ಕಂಬ ಮುರಿದು ರಸ್ತೆ ಬಿದ್ದಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT