ಸೋಮವಾರ, ಮಾರ್ಚ್ 27, 2023
24 °C

ಮಡಿಕೇರಿ: ಒಂದೇ ದಿನದಲ್ಲಿ ಚೆಂಬು ಗ್ರಾಮದಲ್ಲಿ 19 ಸೆಂ.ಮೀ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆ ಮುಂದುವರಿದಿದೆ. ಹವಾಮಾನ ಇಲಾಖೆ ಇಂದೂ ರೆಡ್ ಅಲರ್ಟ್ ಘೋಷಿಸಿದೆ‌. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ 19 ಸೆಂ.ಮೀನಷ್ಟು ಭಾರಿ ಮಳೆ ಸುರಿದಿದೆ.

'ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಗೆ ಕೆಲವು ಮನೆಗಳ ಸಮೀಪ  ಮಣ್ಣು ಕುಸಿದಿದ್ದು ಅವರೆಲ್ಲರೂ ಸಂಬಂಧಿಕರ ಮನೆಗೆ ತೆರಳಿದ್ದಾರೆ.

ಮಳೆ ಇನ್ನೂ ಮುಂದುವರಿದಿದೆ. 2018ರಲ್ಲಿ ಈ ಪ್ರಮಾಣದ ಮಳೆ ಬಂದಿತ್ತು' ಎಂದು ಸ್ಥಳೀಯರು ತಿಳಿಸಿದ್ದಾರೆ‌.
ಭಾಗಮಂಡಲದಲ್ಲಿ ‌ 9, ಎಮ್ಮೆಮಾಡುವಿನಲ್ಲಿ 8, ಸೋಮವಾರಪೇಟೆಯ ಶಿರಂಗಾಲದಲ್ಲಿ 6 ಸೆಂ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು