ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿಯಲ್ಲಿ ಹೆಸರು: ಪರಿಷತ್ ಸದಸ್ಯರಿಗೆ ನೋಟಿಸ್ ನೀಡಲು ಹೈಕೋರ್ಟ್ ಸೂಚನೆ

Last Updated 17 ನವೆಂಬರ್ 2021, 7:09 IST
ಅಕ್ಷರ ಗಾತ್ರ

ಕಲಬುರಗಿ: ಬಿಜೆಪಿಯ ಏಳು ಜನ ವಿಧಾನಪರಿಷತ್ ಸದಸ್ಯರು ಕಲಬುರಗಿ ದಕ್ಷಿಣ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರುಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಪಾಲಿಕೆ ಸದಸ್ಯರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ‌ಹೈಕೋರ್ಟ್ ಕಲಬುರಗಿ ಪೀಠವು ವಿಧಾನಪರಿಷತ್ ಸದಸ್ಯರಿಗೆ ‌ಖುದ್ದು ನೋಟಿಸ್ ನೀಡಲು ಸೂಚನೆ ನೀಡಿದೆ.

ಅಲ್ಲದೇ ಈ ಕುರಿತು ಇದೇ 29ಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ತಿಳಿಸಿದೆ.

ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ಕಲಬುರಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಬಿಜೆಪಿ ಸದಸ್ಯರಾದ ಲಕ್ಷ್ಮಣ ಸವದಿ, ತುಳಸಿ ಮುನಿರಾಜುಗೌಡ, ಭಾರತಿ ಶೆಟ್ಟಿ, ಪ್ರತಾಪ ಸಿಂಹ ನಾಯಕ್, ಲೆಹರ್ ಸಿಂಗ್, ರಘುನಾಥ ಮಲ್ಕಾಪುರೆ, ಡಾ. ತಳವಾರ ಸಾಬಣ್ಣ ಅವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಮಹಾನಗರ ಪಾಲಿಕೆಯ ಸದಸ್ಯರಾದ ವರ್ಷಾ ಜಾನೆ ಹಾಗೂ ತೃಪ್ತಿ ಲಾಖೆ ಅವರು ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ‌ಸಲ್ಲಿಸಿದ್ದರು.

ಬುಧವಾರ ‌ಅರ್ಜಿಯ ವಿಚಾರಣೆ ‌ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ನ್ಯಾಯಪೀಠವು ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿತು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಎ.ಎಸ್.‌ ಪೊನ್ನಣ್ಣ ಅವರು ವಾದ ಮಂಡಿಸಿದರು.

ಏತನ್ಮಧ್ಯೆ ವಿಧಾನಪರಿಷತ್ ಚುನಾವಣೆಯಲ್ಲಿ ಅಧಿಕಾರಿಗಳು ತೊಡಗಿರುವುದರಿಂದ ಕಲಬುರಗಿ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯನ್ನು ಸದ್ಯಕ್ಕೆ ನಡೆಸಲು ಆಗುವುದಿಲ್ಲ ಎಂಬ ಕಾರಣ ನೀಡಿ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್ ಅವರು ಚುನಾವಣೆ ಮುಂದೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT