ಗುರುವಾರ , ಜನವರಿ 20, 2022
15 °C

ಹೈಮಾಸ್ಟ್ ಕಂಬದ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಸೇಡಂ ರಸ್ತೆಯ ಎನ್‌ಜಿಓ ಕಾಲೊನಿಯ ಉದ್ಯಾನದಲ್ಲಿದ್ದ ಹೈಮಾಸ್ಟ್ ಕಂಬದ ಮೇಲೆ ಕೈಇಟ್ಟ ಪರಿಣಾಮ ವಿದ್ಯುತ್ ಪ್ರವಹಿಸಿ ಬಾಲಕನೊಬ್ಬ ಬುಧವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಜಿಲ್ಲೆಯ ಮುಗಳನಾಗಾಂವ ಗ್ರಾಮದ ಸುರೇಶ ಕಂಬಾರ ಹಾಗೂ ಮಹಾದೇವಿ ದಂಪತಿಯ ಪುತ್ರ ಸಿದ್ದು (7) ಮೃತಪಟ್ಟ ಬಾಲಕ. ಕಳೆದ ಒಂದು ವಾರದಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದು, ವಿದ್ಯುತ್ ವೈರ್‌ಗಳಲ್ಲಿ ದೋಷ ಕಾಣಿಸಿಕೊಂಡು ವಿದ್ಯುತ್ ಶಾಕ್ ಹೊಡೆಯುತ್ತಿದೆ. ಹೈಮಾಸ್ಟ್ ಕಂಬದ ಬಳಿ ಒಬ್ಬನೇ ಆಟವಾಡಲು ಹೋದ ಬಾಲಕ ಕಂಬದ ಕೆಳಭಾಗದಲ್ಲಿ ಅಳವಡಿಸಲಾದ ವಿದ್ಯುತ್ ಬಾಕ್ಸ್‌ ಬಳಿ ಕೈ ಇಟ್ಟಿದ್ದರಿಂದ ವಿದ್ಯುತ್ ಶಾಕ್ ಹೊಡೆದಿದೆ.

‘ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ. ಮಳೆಗಾಲ ಆರಂಭವಾದ ಬಳಿಕ ಅಧಿಕಾರಿಗಳು ನಿರಂತರವಾಗಿ ತಪಾಸಣೆ ಮಾಡಬೇಕು. ಬಾಲಕನ ಸಾವಿಗೆ ತಕ್ಷಣ ಪರಿಹಾರ ಘೋಷಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇಬ್ಬರೂ ದಂಪತಿ ನಗರದಲ್ಲಿ ಕಟ್ಟಡ ಕೆಲಸ ಮಾಡಿಕೊಂಡು ಮಗುವನ್ನು ನೋಡಿಕೊಳ್ಳುತ್ತಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು