ಸೋಮವಾರ, ಏಪ್ರಿಲ್ 12, 2021
24 °C

ಫೆ. 14ಕ್ಕೆ ಎಚ್‌ಕೆಸಿಸಿಐ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೊವಿಡ್– 19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‍ಕೆಸಿಸಿಐ)ಯ ಚುನಾವಣೆಯನ್ನು ಫೆ. 14ರಂದು ನಡೆಸಲು ನಿರ್ಧರಿಸಲಾಗಿದೆ.

2020ರ ಮಾರ್ಚ್ 29ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕೊನೆ ಘಳಿಗೆಯಲ್ಲಿ ಮುಂದೂಡಲಾಗಿತ್ತು. ಮತ್ತೆ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಜ.30ರಿಂದ ಚುನಾವಣೆ ಪ್ರಕ್ರಿಯೆ ಆರಂಭಗೊಂಡು, ಫೆ. 14ರೊಳಗೆ ಮುಕ್ತಾಯಗೊಳಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಅದರ ಅನುಸಾರ ಹೊಸ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.

ವೇಳಾಪಟ್ಟಿ ಪ್ರಕಟಿಸಿದ ನಂತರ ವರ್ತಕರ ವಲಯದಲ್ಲಿ ಚಟುವಟಿಕೆಗೆ ಚುರುಕುಗೊಂಡಿವೆ. ಆಕಾಂಕ್ಷಿಗಳು ಮತ್ತೆ ಸಭೆಗಳನ್ನು ಆರಂಭಿಸಿದ್ದಾರೆ. ‘ನ್ಯಾಯಾಲಯ ಆದೇಶದಂತೆ ಚುನಾವಣೆ ಪ್ರಕ್ರಿಯೆ ನಡೆಸಲಾಗುವುದು. ನಾಮಪತ್ರ ಸಲ್ಲಿಕೆಯಿಂದ ಹಿಡಿದು ಮತದಾನವರೆಗೂ ನಿಯಮಾವಳಿಗಳನ್ನು ಪಾಲಿಸಲಾಗುತ್ತದೆ’ ಎಂದ ಚುನಾವಣಾಧಿಕಾರಿ ಬಸವರಾಜ ಇಂಗಿನ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು