ಕಲಬುರ್ಗಿ: ‘ಪೊಲೀಸರಂತೆಯೇ ಗೃಹರಕ್ಷಕ ದಳದ ಸಿಬ್ಬಂದಿ ಕೂಡ ಸಮಾಜದ ರಕ್ಷಣೆಗೆ ತೊಡಗಿಸಿಕೊಂಡವರು. ಅವರ ನಿಷ್ಕಾಮ, ಪ್ರಾಮಾಣಿಕ ಸೇವೆಯಿಂದಲೇ ಇಲಾಖೆಗೆ ಉತ್ತಮ ಹೆಸರು ಬಂದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಂ ಜಾರ್ಜ್ ಪ್ರಶಂಸಿಸಿದರು.

ಇಲ್ಲಿನ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗೃಹರಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಶಿಸ್ತಿಗೆ ಹೆಸರಾದ ಗೃಹರಕ್ಷಕ ದಳದ ನಿಷ್ಕಾಮ ಸೇವೆಯನ್ನು ಸ್ಮರಣಾರ್ಹ. ಭೀಮಾ ನದಿಯ ಪ್ರವಾಹ ಸಂದರ್ಭದಲ್ಲಿ, ಅತಿವೃಷ್ಟಿ ಹಾಗೂ ಅಗ್ನಿ ಅವಘಡಗಳ ಸಂದರ್ಭದಲ್ಲಿ ಜನರ ಜೀವ ಹಾಗೂ ಆಸ್ತಿ ರಕ್ಷಣೆ ಮಾಡಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಗೃಹ ರಕ್ಷಕರಿಗೆ ಅಭಿನಂದನೆ ಸಲ್ಲಿಸಬೇಕು’ ಎಂದರು.

‘ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಕಾರ್ಯಕ್ಕೆ ಗೃಹ ರಕ್ಷಕರನ್ನು ನಿಯೋಜಿಸಬೇಕು. ಪೊಲೀಸರೊಂದಿಗೆ ಅವರೂ ಕೈ ಜೋಡಿಸಿದಾಗ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕಾರಿ ಆಗುತ್ತದೆ’ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಆವರಣದಲ್ಲಿ ಸಸಿ ನೆಡಲಾಯಿತು. ಕಲಬುರ್ಗಿ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಸಂತೋಷ ಕುಮಾರ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಸಮಾದೇಷ್ಟ ಮಲ್ಲಪ್ಪ ಹಾಗೂ ಕಚೇರಿಯ ಸಿಬ್ಬಂದಿ, ಗೃಹ ರಕ್ಷಕ ದಳದ ಹಿರಿಯ ಅಧಿಕಾರಿಗಳು ಹಾಗೂ ಗೃಹ ರಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.