ಕಲಬುರಗಿ: ಶಹಾಬಾದ್ ತಾಲ್ಲೂಕಿನ ಅತಿ ದೊಡ್ಡ ಗ್ರಾಮವಾದ ಹೊನಗುಂಟಾದಲ್ಲಿ ಸಮರ್ಪಕ ರಸ್ತೆ, ಕುಡಿಯುವ ನೀರು, ಶೌಚಾಲಯದಂತಹ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸುಮಾರು 200ಕ್ಕೂ ಅಧಿಕ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸುಮಾರು ಎರಡು ತಾಸಿಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದರು.

ಭೀಮಾ ಹಾಗೂ ಕಾಗಿಣಾ ನದಿಗಳ ಸಂಗಮ ಹೊಂದಿದ್ದರೂ ನೀರಿನ ಸಮಸ್ಯೆಯಿಂದ ಇಲ್ಲಿನ ಜನರು ಪರಿತಪಿಸುತ್ತಿದ್ದಾರೆ. ದೂರದ ಶಹಾಬಾದ್ ನಗರಕ್ಕೆ ಇಲ್ಲಿಂದ ನೀರು ಪೂರೈಕೆ ಮಾಡುತ್ತಾರೆ. ಆದರೆ, ಇಲ್ಲಿನ ಆಡಳಿತ ವ್ಯವಸ್ಥೆಗೆ ಗ್ರಾಮಸ್ಥರಿಗೆ ನೀರು ತಲುಪಿಸಲು ಆಗುತ್ತಿಲ್ಲ. ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಏಳುವ ಪರಿಸ್ಥಿತಿ ಉಂಟಾಗಿದೆ. ಮತ್ತೊಂದೆಡೆ ಗ್ರಾಮದ ಹಳೆಯ ಬಡಾವಣೆಗಳಲ್ಲಿ ಇಕ್ಕಟ್ಟಾದ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿರುವುದರಿಂದ ಪ್ರತ್ಯೇಕ ಶೌಚಾಲಯ ಕಟ್ಟಿಕೊಳ್ಳಲು ಸ್ಥಳಾವಕಾಶವಿಲ್ಲ. ಆದ್ದರಿಂದ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿಕೊಡಬೇಕು. ಕೆಲವು ಕಡೆ ಬೀದಿ ದೀಪಗಳಿಲ್ಲ ಎಂದು ಆರೋಪಿಸಿದರು.

ಗ್ರಾಮದಲ್ಲಿ ನೈರ್ಮಲ್ಯವನ್ನು ಕಾಪಾಡುವುದರ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬೇಕು. ನಾಲವಾರ ಗ್ರಾಮದಲ್ಲಿ ನಿರ್ಮಿಸಿದಂತೆ ಹೈಟೆಕ್ ಸಾರ್ವಜನಿಕ ಪುರುಷ ಮತ್ತು ಮಹಿಳಾ ಶೌಚಾಲಯಗಳನ್ನು ನಿರ್ಮಿಸಬೇಕು. ಸಮರ್ಪಕವಾದ ಅಂಗನವಾಡಿ ಕಟ್ಟಡ ನಿರ್ಮಿಸಬೇಕು. ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಹಿಂದೆ ಇದ್ದ ಸಮುದಾಯ ಆರೋಗ್ಯ ಅಧಿಕಾರಿ ರಾಜೀನಾಮೆ ನೀಡಿದ್ದು, ಕೂಡಲೇ ಬೇರೊಬ್ಬರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಸಿಇಒ ಭಂವರ್ ಸಿಂಗ್ ಮೀನಾ ಅವರು ಸೇಡಂ ಪ್ರವಾಸದಲ್ಲಿದ್ದುದರಿಂದ ಮನವಿ ಸ್ವೀಕರಿಸಲು ಬರಲಿಲ್ಲ. ಹೀಗಾಗಿ, ಹೊನಗುಂಟಾ ನಾಗರಿಕ ಹೋರಾಟ ಸಮಿತಿ ಮುಖಂಡರ ಮೊಬೈಲ್ಗೆ ಕರೆ ಮಾಡಿದ ಮೀನಾ ಅವರು ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು. ರಸ್ತೆ ನಿರ್ಮಾಣಕ್ಕೆ ಸರ್ವೆ ಮಾಡಲಾಗಿದೆ. ಪಿಡಿಒಗೆ ಕುಡಿಯುವ ನೀರು, ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಭರವಸೆ ನೀಡಿದರು.

ಹೋರಾಟ ಸಮಿತಿ ಮುಖಂಡರಾದ ಜಗನ್ನಾಥ ಎಸ್.ಎಸ್, ನಿಂಗಮ್ಮ ಬೆಣ್ಣೂರ, ಅಶ್ವಿನಿ ಬಾಳಕ್, ಗುಂಡಮ್ಮ ಮಡಿವಾಳ, ರಮೇಶ ದೇವಕರ್, ಮೌನೇಶ ರಾಜವಾಳ, ದೇವು ರಾಜವಾಳ, ಸಾಯಿಬಣ್ಣಾ ಬನ್ನೇಪ್ಪನೋರ, ಶಂಕರ ಭಜಂತ್ರಿ, ಪಾರ್ವತಿ ಯಾಳಗಿ, ಸಾಬಮ್ಮ ಟೈಲರ್, ನಿಂಗಮ್ಮ ಸಣ್ಣಮನಿ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.