ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿಶಾಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Published 9 ಮಾರ್ಚ್ 2024, 4:57 IST
Last Updated 9 ಮಾರ್ಚ್ 2024, 4:57 IST
ಅಕ್ಷರ ಗಾತ್ರ

ವಾಡಿ: ತಾನು ವಾಸವಿದ್ದ ವಸತಿ ಶಾಲೆಯಲ್ಲೇ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರಬಾ ವಸತಿ ಶಾಲೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  

ವಾಡಿ ಸಮೀಪದ ಕಡಬೂರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಸಾಬಣ್ಣ ನಾಯ್ಕೋಡಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

2 ವರ್ಷಗಳಿಂದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಅಭ್ಯಾಸ ಮಾಡುತ್ತಿದ್ದಳು. ಶಿವರಾತ್ರಿ ಹಬ್ಬದ ರಜೆ ಹಿನ್ನೆಲೆಯಲ್ಲಿ ವಸತಿ ಶಾಲೆಯಲ್ಲಿನ ಹಲವು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಸಹಿತ ಹಲವು ಶಿಕ್ಷಕರು ಹಾಗೂ ಸಿಬ್ಬಂದಿ ತಮ್ಮ ಗ್ರಾಮಗಳಿಗೆ ತೆರಳಿದ್ದರು.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರು ಹಾಗೂ ಚಿತ್ತಾಪುರ ಪಿಎಸ್ಐ ಸುದರ್ಶನರೆಡ್ಡಿ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT