ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫಜಲಪುರ | ಹಾಳಾದ ಶೌಚಗೃಹ: ಸ್ವಚ್ಛತೆ ಮರೀಚಿಕೆ

ಅಫಜಲಪುರ: ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ
Published 8 ಆಗಸ್ಟ್ 2023, 5:46 IST
Last Updated 8 ಆಗಸ್ಟ್ 2023, 5:46 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಮೆಟ್ರಿಕ್ ಮತ್ತು ಮೆಟ್ರಿಕ್ ನಂತರದ 30 ವಸತಿ ನಿಲಯಗಳಿವೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 18 ವಸತಿ ನಿಲಯಗಳಿದ್ದು, ಅದರಲ್ಲಿ 12 ಸ್ವಂತ ಹಾಗೂ 6 ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ.

ಕೆಲವು ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಇದೆ. ಇನ್ನೂ ಕೆಲವು ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳಾಗಿವೆ. ಹೀಗಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಸಮಾಜ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ವಿದ್ಯಾರ್ಥಿಗಳ ಪದವಿ ಮತ್ತು ಪದವಿ ಪೂರ್ವ ವಸತಿ ನಿಲಯದಲ್ಲಿ 300 ವಿದ್ಯಾರ್ಥಿಗಳಿದ್ದಾರೆ. ಆದರೆ ಮೂಲ ಸೌಕರ್ಯ ಇಲ್ಲ. ಶೌಚಾಲಯಗಳು ಹಾಳಾಗಿವೆ. ವಿದ್ಯಾರ್ಥಿಗಳು ಸೌಲಭ್ಯಕ್ಕಾಗಿ ಸಾಕಷ್ಟು ಬಾರಿ ತಾಲ್ಲೂಕು ಸಮನ್ವಯ ಅಧಿಕಾರಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

5 ವರ್ಷಗಳ ಹಿಂದೆ ₹60 ಲಕ್ಷ ವೆಚ್ಚದಲ್ಲಿ ಕಲಬುರಗಿ ರಸ್ತೆಯಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ನಿರ್ಮಾಣ ಮಾಡಿದ ಒಂದು ವರ್ಷದಲ್ಲಿಯೇ ಅದು ಸೋರುತ್ತಿದೆ. ಅಲ್ಲಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿ ಆ ವಿದ್ಯಾರ್ಥಿಗಳನ್ನು ಪದವಿ ಪೂರ್ವ ಕಾಲೇಜು ವಸತಿ ನಿಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಒಂದೇ ವಿದ್ಯಾರ್ಥಿ ನಿಲಯದಲ್ಲಿ ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳು ವಾಸವಾಗಿದ್ದಾರೆ. ಅವರಿಗೆ ಶೌಚಾಲಯದ ಸಮಸ್ಯೆಯಾಗುತ್ತಿದೆ. ವಾಚನಾಲಯದ ವ್ಯವಸ್ಥೆ ಇದೆ. ಆದರೆ ಸರಿಯಾಗಿ ಕುಳಿತು ಓದಲು ಆಸನದ ವ್ಯವಸ್ಥೆ ಇಲ್ಲ. ಆಟದ ಮೈದಾನ ಇಲ್ಲ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ 18 ವಸತಿ ನಿಲಯಗಳಿವೆ. ಅವುಗಳಲ್ಲಿ ತಾಲ್ಲೂಕಿನ ಹಾವನೂರ, ಮಣೂರ, ಅಫಜಲಪುರ ಪಟ್ಟಣ, ಉಡಚಾಣ, ಕರಜಗಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ವಸತಿ ನಿಲಯಗಳನ್ನು ನಡೆಸಲಾಗುತ್ತಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಸ್ವಚ್ಛತೆ ಮರೀಚಿಕೆಯಾಗಿದೆ. ಶೌಚಾಲಯದ ವ್ಯವಸ್ಥೆ ಇಲ್ಲ. ನಿತ್ಯ ಪರದಾಡುವಂತಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 6 ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ನಿವೇಶನ ಮಂಜೂರು ಮಾಡಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನಿವೇಶನ ಖರೀದಿ ಮಾಡಿದ ನಂತರ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ಉಡಚಾಣದಲ್ಲಿ ವಸತಿ ನಿಲಯ ಕಟ್ಟಡ ನಿರ್ಮಿಸಲು ಕ್ರಿಯಾಯೋಜನೆ ಸಲ್ಲಿಸಲಾಗಿದೆ. ನಿವೇಶನ ಗುರುತಿಸಲಾಗಿದೆ ಸಂಜಯಕುಮಾರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾ ಅಧಿಕಾರಿ ವಸತಿ ನಿಲಯದಲ್ಲಿ ಹೊದಿಕೆ ನೀಡಿಲ್ಲ. ಶೌಚಾಲಯ ವ್ಯವಸ್ಥೆ ಇಲ್ಲ. ವಾಚನಾಲಯವಿದ್ದರೂ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿಲ್ಲ. ಸೌಲಭ್ಯ ಒದಗಿಸಲು ಒತ್ತಾಯಿಸಿ ಹಲವು ಬಾರಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ದೂರು ನೀಡಿದ್ದೇವೆ. ಆದರೂ ಪ್ರಯೋಜನವಾಗಿಲ್ಲ ರಮೇಶ ಬಸರಿಗಿಡದ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT