ಕಲಬುರಗಿ: ‘ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟವರಿಗೆ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರೇ ಆರೋಪ ಮಾಡಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ರಾಜೀನಾಮೆ ಪಡೆಯಬೇಕು’ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ ಒತ್ತಾಯಿಸಿದ್ದಾರೆ.

‘ಕಾಂಗ್ರೆಸ್ ಆಡಳಿತದಲ್ಲಿ ವಸತಿ ಹಂಚಿಕೆಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಬಿ.ಆರ್. ಪಾಟೀಲ ಅವರು ನಾಲ್ಕೈದು ಪತ್ರಗಳನ್ನು ಬರೆದಿದ್ದರೂ ಮನೆಗಳನ್ನು ಹಂಚಿಕೆ ಮಾಡಿಲ್ಲ. ಆದರೆ, ಗ್ರಾಮ ಪಂಚಾಯಿತಿ ಅಧ್ಯಕ್ಷರ ಪತ್ರಗಳನ್ನು ಪರಿಗಣಿಸಿ 955 ಮನೆಗಳನ್ನು ಮಂಜೂರು ಮಾಡಲಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಕಳೆದ ವರ್ಷವೇ ಬಸವ ವಸತಿ, ಅಂಬೇಡ್ಕರ್ ವಸತಿ ಯೋಜನೆಗಳಲ್ಲಿ ಪ್ರತಿ ಮನೆಗೆ ₹ 5 ಸಾವಿರ ಪಡೆದು ಹಂಚಿಕೆ ಮಾಡಲಾಗಿದೆ ಎಂದು ನಾನೇ ಹೇಳಿದ್ದೆ. ಇದುವರೆಗೂ ಅದರ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ಕಾಂಗ್ರೆಸ್ನ ಶಾಸಕರೇ ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಹೊರಗೆ ಎಳೆದಿದ್ದಾರೆ. ಅಫಜಲಪುರದಲ್ಲಿ ನಗರ ವಸತಿ ಯೋಜನೆಯಲ್ಲಿ 256 ಮನೆಗಳ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ, ₹ 2.56 ಕೋಟಿ ಅಕ್ರಮ ಎಸಗಲಾಗಿದೆ’ ಎಂದಿದ್ದಾರೆ.

‘ಜಿಲ್ಲೆಯಲ್ಲಿ ಕಳೆದ 3 ವರ್ಷಗಳಲ್ಲಿ ಬಸವ ವಸತಿ ಯೋಜನೆಯಡಿ 24,777 ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ 4,537 ಮನೆಗಳನ್ನು ಮಂಜೂರು ಮಾಡಲಾಗಿದೆ. ಇವುಗಳಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಹಣ ಕೊಟ್ಟವರಿಗೆ ಮಾತ್ರವೇ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ವಸತಿ ಇಲಾಖೆಯಲ್ಲಿ ಹಲವು ಹಗರಣಗಳು ನಡೆದಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.