ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

3580 ಫಲಾನುಭವಿಗಳ ಪೈಕಿ 1250 ಜನರಿಗೆ ಸೌಲಭ್ಯ ವಿತರಿಸಿದ ಕಂದಾಯ ಸಚಿವ ಆರ್‌.ಅಶೋಕ
Last Updated 29 ಫೆಬ್ರುವರಿ 2020, 10:01 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡು ಸಕ್ರಮ ಮಾಡಿಕೊಂಡ ಫಲಾನುಭವಿಗಳಿಗೆ ಕಂದಾಯ ಸಚಿವ ಆರ್. ಅಶೋಕ ಅವರು ಶುಕ್ರವಾರ ಹಕ್ಕು ಪತ್ರಗಳನ್ನು ವಿತರಿಸಿದರು.

ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಹಕ್ಕು ಪತ್ರ ವಿತರಿಸಿ ನಂತರ ಮಾತನಾಡಿದ ಅವರು, ‘ಇಂದಿನಿಂದ ಈ ಜಮೀನು ಸರ್ಕಾರದಲ್ಲ, ಇದು ನಿಮ್ಮ ಸ್ವತ್ತು. ನೆಮ್ಮದಿಯಿಂದ ವಾಸ ಮಾಡಬಹುದು’ ಎಂದರು.

ಹಕ್ಕು ಪತ್ರ ವಿತರಣೆ ಮಾಡುವುದಷ್ಟೆ ಅಲ್ಲ, ಖಾತಾ ಮತ್ತು ನೋಂದಣಿ ಸಹ ಫಲಾಭವಿಗಳ ಹೆಸರಿಗೆ ಮಾಡಿಕೊಡಲಾಗುವುದು. ದೀನ ದಲಿತರು ಮತ್ತು ಬಡವರ ಉದ್ಧಾರಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ 94ಸಿ ಮತ್ತು 94ಸಿಸಿ ಪ್ರಕರಣಗಳಲ್ಲಿ 3580 ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ ವಿತರಣೆಗೆ ಆಯ್ಕೆ ಮಾಡಲಾಗಿದ್ದು, ಶುಕ್ರವಾರ 1250 ಜನರಿಗೆ ಇಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಹಲವಾರು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಹಕ್ಕು ಪತ್ರ ವಿತರಣೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೂರು ತಿಂಗಳಲ್ಲಿ ಎಲ್ಲಾ ತೊಡಕುಗಳನ್ನು ನಿವಾರಿಸಿ ಇಂದು ಬಡವರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ ಎಂದರು.

ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ಡಾ.ಅವಿನಾಶ್ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಜಿಲ್ಲಾಧಿಕಾರಿ ಶರತ್ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸೇರಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ನೂರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಇದ್ದರು. ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ರಮೇಶ ಸಂಗಾ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT