ಕಲಬುರಗಿ: ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಲಂಚ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಿರುವ ಕುರಿತು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ ತಮ್ಮದೇ ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರ ಮೊಬೈಲ್ಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಪಾಟೀಲ ಅವರು, ಲಂಚ ಪಡೆದು ಯಾವ ಗ್ರಾಮಕ್ಕೆ ಎಷ್ಟು ಮನೆಗಳನ್ನು ಮಂಜೂರು ಮಾಡಲಾಗಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ‘ಈ ಮಾಹಿತಿಯನ್ನು ನಾನು ಬಹಿರಂಗಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ’ ಎಂದೂ ಶಾಸಕರು ಎಚ್ಚರಿಕೆ ನೀಡಿದ್ದಾರೆ.

ಬಿ.ಆರ್.ಪಾಟೀಲ ಅವರು ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡಿರುವ ಮೊಬೈಲ್ ಕರೆಯ ಆಡಿಯೊ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.

ಸಂಭಾಷಣೆಯಲ್ಲೇನಿದೆ?: ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿಗೆ ಕರೆ ಮಾಡುವ ಬಿ.ಆರ್. ಪಾಟೀಲ, ‘ಹಣ ನೀಡಿದವರಿಗಷ್ಟೇ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ’ ಎಂದು ಆರಂಭದಲ್ಲೇ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಅದಕ್ಕೆ ಸರ್ಫರಾಜ್ ಖಾನ್ ಅವರು, ‘ಯಾವ ಕ್ಷೇತ್ರದಲ್ಲಿ ಹೀಗೆ ಆಗಿದೆ ಮಾಹಿತಿ ಕೊಡಿ. ಕೂಡಲೇ ಅವರನ್ನು ಜೈಲಿಗೆ ಕಳುಹಿಸುತ್ತೇವೆ’ ಎನ್ನುತ್ತಾರೆ.

ಇದಕ್ಕೆ ವ್ಯಂಗ್ಯವಾಗಿ ನಗುವ ಬಿ.ಆರ್. ಪಾಟೀಲರು, ‘ಆಳಂದ ಮತಕ್ಷೇತ್ರದ ಮುನ್ನಳ್ಳಿಯಲ್ಲಿ 200 ಮನೆ, ದರ್ಗಾ ಶಿರೂರ 100, ಧಂಗಾಪುರದಲ್ಲಿ 200, ಕವಲಗಾದಲ್ಲಿ 200, ಮಾಡಿಯಾಳದಲ್ಲಿ 200 ಮನೆ ಸೇರಿದಂತೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ. ಪಕ್ಕದ ಅಫಜಲಪುರ ಕ್ಷೇತ್ರದಲ್ಲಿಯೂ ಹಣ ಪಡೆದೇ ಮನೆಗಳನ್ನು ಹಂಚಿಕೆ ಮಾಡಲಾಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ನಾನು ಕೊಟ್ಟ ಶಿಫಾರಸು ಪತ್ರಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಬದಲಾಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ನೀಡಿದ ಪಟ್ಟಿಗೆ ಅನುಮೋದನೆ ನೀಡಿದ್ದೀರಿ. ಶಾಸಕ ನೀಡಿದ ಪತ್ರಕ್ಕೆ ಬೆಲೆಯೇ ಇಲ್ಲವೇ’ ಎಂದೂ ಖಾರವಾಗಿ ಪ್ರಶ್ನಿಸಿದ್ದಾರೆ.

ಶಾಸಕರನ್ನು ಸಮಾಧಾನ ಮಾಡಲು ಯತ್ನಿಸಿದ ಸರ್ಫರಾಜ್ ಅವರು, ‘ನೀವು ಯಾರ ಹೆಸರುಗಳನ್ನು ಶಿಫಾರಸು ಮಾಡಿದ್ದೀರೋ ಅವರ ಪಟ್ಟಿ ಕೊಡಿ ಸರ್. ಅವರಿಗೆ ಮಂಜೂರು ಮಾಡುತ್ತೇವೆ. ಹಣ ಪಡೆದು ಹಂಚಿಕೆ ಮಾಡಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡುತ್ತಾರೆ.

ಮನೆ ಮಂಜೂರಾತಿ ಅವ್ಯವಹಾರದ ಕುರಿತು ಪ್ರತಿಕ್ರಿಯೆ ಪಡೆಯಲು ‘ಪ್ರಜಾವಾಣಿ’ಯು ಶಾಸಕ ಬಿ.ಆರ್. ಪಾಟೀಲರನ್ನು ಸಂಪರ್ಕಿಸಿದಾಗ, ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.