ಬುಧವಾರ, ಡಿಸೆಂಬರ್ 8, 2021
18 °C

ಲಾಕ್‌ಡೌನ್‌ | ಆರ್ಥಿಕ ನೆರವಿಗೆ ಹೂಗಾರರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ‘ಲಾಕ್‍ಡೌನ್‌ನಿಂದಾಗಿ ಹೂಗಾರ ಸಮುದಾಯದ ಲಕ್ಷಾಂತರ ಜನರು ಕಾಯಕವಿಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಹೂಗಾರ ಸಮುದಾಯದವರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು’ ಎಂದು ಅಫಜಲಪುರ ತಾಲ್ಲೂಕು ಹೂಗಾರ ಸಮಾಜದ ಅಧ್ಯಕ್ಷ ಮಡಿವಾಳ ಹೂಗಾರ ಸೋಮವಾರ ಇಲ್ಲಿ ಆಗ್ರಹಿಸಿದರು.

ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿ ಮಾತನಾಡಿದ ಅವರು, ‘ಸರ್ಕಾರವು ಕೊರೊನಾ ಹಿನ್ನೆಲೆಯಲ್ಲಿ ಶ್ರಮಿಕರಿಗೆ ವಿಶೇಷ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ಆದರೆ ಹೂಗಾರ ಸಮುದಾಯವನ್ನು ಕಡೆಗಣಿಸಿರುವುದನ್ನು ನಾವು ಖಂಡಿಸುತ್ತೇವೆ’ ಎಂದರು.

ತಾಲ್ಲೂಕು ಕಬ್ಬ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ,‘ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಹೂಗಾರರು ಪ್ರತಿಯೊಂದು ಸಮಾಜಕ್ಕೂ ಬೇಕು. ಅವರ ಕೊಡುಗೆಯನ್ನು ಗಮನಿಸಿ ಸರ್ಕಾರ ಕೂಡಲೇ ವಿಶೇಷ ಆರ್ಥಿಕ ನೆರವು ಘೋಷಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ರೇವಣಸಿದ್ಧ ಹೂಗಾರ, ಬಸವರಾಜ ಹೂಗಾರ, ಶರಣಪ್ಪ ಅವಟೆ, ಸಿದ್ದು ಹೂಗಾರ, ಶ್ರೀಶೈಲ ಹೂಗಾರ, ವಿಕಾಸ ಹೂಗಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು