ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಇಂಡಿಯಾ‘ಕ್ಕೆ ಬಹುಮತ ಬಂದರೆ ಮಲ್ಲಿಕಾರ್ಜುನ್‌ ಖರ್ಗೆ ಪ್ರಧಾನ ಮಂತ್ರಿ: ಮಾಲಿಕಯ್ಯ

Published 27 ಮೇ 2024, 15:36 IST
Last Updated 27 ಮೇ 2024, 15:36 IST
ಅಕ್ಷರ ಗಾತ್ರ

ಅಫಜಲಪುರ: ‘ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡುವ ಲಕ್ಷಣಗಳು ಕಂಡು ಬರುತ್ತಿಲ್ಲ. ಪ್ರಧಾನಮಂತ್ರಿ ಮೋದಿ ಅವರು ತಮ್ಮ ಚುನಾವಣೆಯ ಭಾಷಣದಲ್ಲಿ ಹತಾಶರಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಸೋಲಿನ ಭಯ ಕಾಡುತ್ತಿದೆ. ಹೀಗಾಗಿ ಒಂದು ವೇಳೆ ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ಬಂದರೆ ಕೇಂದ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪ್ರಧಾನ ಮಂತ್ರಿಯಾಗುತ್ತಾರೆ’ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ತಿಳಿಸಿದರು.

ಪಟ್ಟಣದ ನ್ಯಾಷನಲ್ ಫಂಕ್ಷನ್ ಮೈದಾನದಲ್ಲಿ ಸೋಮವಾರ ಈಶಾನ್ಯ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ.ಚಂದ್ರಶೇಖರ್ ಬಿ. ಪಾಟೀಲ್ ಅವರ ಚುನಾವಣೆ ಪ್ರಚಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ಈಶಾನ್ಯ ಕರ್ನಾಟಕ ವಿಧಾನ ಪರಿಷತ್ ಅಭ್ಯರ್ಥಿಯಾಗಿರುವ ಚಂದ್ರಶೇಖರ್ ಪಾಟೀಲ್ ಕೆಲಸಗಾರರಾಗಿದ್ದಾರೆ. ಹೀಗಾಗಿ ಎಲ್ಲಾ ಪದವೀಧರರು ಒಕ್ಕಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಮತಕ್ಷೇತ್ರದ ಫರಾತಾಬಾದ್ ವಲಯದ ಮತದಾನ ಕೇಂದ್ರ ಕಲಬುರಗಿಯಲ್ಲಿ ಮಾಡಿದ್ದರಿಂದ ಮತದಾರರಿಗೆ ತೊಂದರೆ ಆಗುತ್ತದೆ. ಅದನ್ನು ಫರಾತಾಬಾದ್‌ ಭಾಗದಲ್ಲಿ ಮಾಡುವಂತೆ ನಾನು ಹಾಗೂ ಶಾಸಕ ಎಂ.ವೈ.ಪಾಟೀಲ್ ಸೇರಿಕೊಂಡು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ’ ಎಂದು ಅವರು ತಿಳಿಸಿದರು.

ಶಾಸಕ ಎಂ.ವೈ.ಪಾಟೀಲ್ ಮಾತನಾಡಿ, ‘ನಮ್ಮ ಕಾಂಗ್ರೆಸ್ ಸರ್ಕಾರ, ಸರ್ಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ತಯಾರಿ ಮಾಡುತ್ತಿದೆ. ಚಂದ್ರಶೇಖರ್ ಪಾಟೀಲ್ ನಮ್ಮ ಭಾಗದವರಾಗಿದ್ದು. ಈ ಹಿಂದೆ ಸಾಕಷ್ಟು ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ನಾವು ಅವರನ್ನು ಆಯ್ಕೆ ಮಾಡಿದರೆ ಅನುಕೂಲವಾಗುತ್ತದೆ. ಅಭಿವೃದ್ಧಿಯ ವೇಗ ಮತ್ತಷ್ಟು ಹೆಚ್ಚಳವಾಗುತ್ತದೆ’ ಎಂದರು.

ಕೆಪಿಸಿಸಿ ಸದಸ್ಯ ಅರುಣ್ ಕುಮಾರ್ ಎಂ. ಪಾಟೀಲ್ ಮಾತನಾಡಿ, ‘ಎಲ್ಲಾ ಪದವೀಧರ ಮತದಾರರು ತಮ್ಮ ತಮ್ಮ ಗ್ರಾಮಗಳಲ್ಲಿ ಗೆಳೆಯರ ಬಳಗಕ್ಕೆ ಮಾಹಿತಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಕೇಳಿಕೊಳ್ಳಬೇಕು’ ಎಂದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ್ ದುತ್ತರಗಾಂವ್, ಸುರೇಶ ತಿಪ್ಪಶೆಟ್ಟಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ, ಪ್ರಕಾಶ್ ಜಮಾದಾರ ಮಾತನಾಡಿದರು.

ಸಮಾರಂಭದಲ್ಲಿ ಪಕ್ಷದ ಮುಖಂಡರಾದ ಶಿವಾನಂದ ಗಾಡಿ ಸಾಹುಕಾರ, ಮತಿನ್ ಪಟೇಲ, ರೇಣುಕಾ ಸಿಂಗೆ, ಜ್ಯೋತಿ ಮುರಗೋಳ, ಸಿದ್ದಾರ್ಥ ಬಸರಿ ಗಿಡದ, ಪ್ರಕಾಶ್ ಜಮಾದಾರ, ಚಂದ್ರಶೇಖರ್ ಕರಜಗಿ, ಕೇಮಸಿಂಗ್‌ ರಾಠೋಡ್, ಸಿದ್ದು ಶಿರಸಿಗಿ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT