‘ರಾಹುಲ್ ಗಾಂಧಿ ಬೀದರ್‌ನಿಂದ ಸ್ಪರ್ಧಿಸಿದರೆ ಸ್ವಾಗತ’

7

‘ರಾಹುಲ್ ಗಾಂಧಿ ಬೀದರ್‌ನಿಂದ ಸ್ಪರ್ಧಿಸಿದರೆ ಸ್ವಾಗತ’

Published:
Updated:

ಕಲಬುರ್ಗಿ: ‘ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಒಂದೊಮ್ಮೆ ಸ್ಪರ್ಧಿಸಿದರೆ ಅದನ್ನು ಸ್ವಾಗತಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಬೀದರ್‌ನಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆ ಬಗ್ಗೆ ಕೆಪಿಸಿಸಿಗೆ ಪ್ರಸ್ತಾವವೂ ಬಂದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಕರ್ನಾಟಕಕ್ಕೆ ಬಿ.ಎಸ್.ಯಡಿಯೂರಪ್ಪನವರ ಕೊಡುಗೆ ಶೂನ್ಯವಾಗಿದೆ. ಏರ್‌ ಷೋ ಸ್ಥಳಾಂತರಗೊಳ್ಳುತ್ತಿದ್ದರೂ ಅದನ್ನು ಇಲ್ಲಿಯೇ ಉಳಿಸಿಕೊಳ್ಳಲು ಆಸಕ್ತಿ ತೋರಿಸುತ್ತಿಲ್ಲ. ಬಿಜೆಪಿ ಸಂಸದರು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ’ ಎಂದು ಆರೋಪಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !