ಭಾನುವಾರ, ಜುಲೈ 3, 2022
27 °C

ಕಲಬುರಗಿ: ಜೆ.ಇ. ಶಾಂತಗೌಡ ಬಿರಾದಾರ ಮನೆಗಳ‌ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಜೇವರ್ಗಿ ಉಪ ವಿಭಾಗದ ಕಿರಿಯ ಎಂಜಿನಿಯರ್ ಶಾಂತಗೌಡ ಬಿರಾದಾರ ಅವರ ಕಲಬುರಗಿ, ಯಡ್ರಾಮಿ ತಾಲ್ಲೂಕಿನ ಹಂಗರಗಾ (ಬಿ) ಮನೆ ಹಾಗೂ ಜೇವರ್ಗಿಯ ಅವರ ಕಚೇರಿ ಮೇಲೆ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಎಸಿಬಿ ಅಧಿಕಾರಿಗಳು ಬೆಳಿಗ್ಗೆ 7ಕ್ಕೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಆದಾಯ ಮೀರಿ ಆಸ್ತಿಗಳಿಕೆಯ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಸರ್ಕಾರದ ಸೌಲಭ್ಯಗಳುˌ ಸಿ.ಸಿ. ರಸ್ತೆ ಸೇರಿದಂತೆ ಹಲವು ಸೌಲಭ್ಯಗಳು ತಮ್ಮ ಮನೆ, ತೋಟಗಳಿಗೆ ಮಾಡಿಸಿಕೊಂಡಿದ್ದಲ್ಲದೆ, ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಾದ ಹಣವನ್ನ ಇತರೆ ಕಡೆಗಳಲ್ಲಿ ಕಾಮಗಾರಿ ಮಾಡಿಸಿ ಅಪಾರ ಪ್ರಮಾಣದ ಹಣ ಮಾಡಿರುವ ಆರೋಪವು ಇವರ ಮೇಲಿದೆ.

ಕಲಬುರಗಿಯ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಗುಬ್ಬಿ ಕಾಲೊನಿಯಲ್ಲಿರುವ ಮನೆಗೆ ನಾಲ್ಕು ಕಾರುಗಳಲ್ಲಿ ಬಂದಿರುವ ಕಲಬುರಗಿ ಎಸಿಬಿ ಅಧಿಕಾರಿಗಳ  ತಂಡ ಪರಿಶೀಲನೆಯಲ್ಲಿ ತೊಡಗಿದೆ.

ಯಡ್ರಾಮಿ ತಾಲ್ಲೂಕಿನ ಹಂಗರಗಾದಲ್ಲಿ ಶಾಂತಗೌಡ ಅವರ ತೋಟದ ಮನೆ ಇದ್ದು, ಅಲ್ಲಿಯೂ ಪರಿಶೀಲನೆ ನಡೆದಿದೆ.

ಇದನ್ನೂ ಓದಿ... ಆದಾಯಕ್ಕಿಂತ ಹೆಚ್ಚು ಆಸ್ತಿ: 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ


ಕಲಬುರಗಿಯ ಗುಬ್ಬಿ ಕಾಲೊನಿಯ ಮನೆಯಲ್ಲಿ ದಾಖಲೆ ತಪಾಸಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು