ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಪರೀಕ್ಷಾ ಕೇಂದ್ರದೊಳಗೆ ಅಕ್ರಮ ಪ್ರವೇಶ: ಶಿಕ್ಷಕ ಅಮಾನತು

Published 4 ಏಪ್ರಿಲ್ 2024, 14:23 IST
Last Updated 4 ಏಪ್ರಿಲ್ 2024, 14:23 IST
ಅಕ್ಷರ ಗಾತ್ರ

ಅಫಜಲಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಶಿರವಾಳ ಗ್ರಾಮದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದೊಳಗೆ ಅಕ್ರಮವಾಗಿ ಪ್ರವೇಶಿಸಿದ ತಾಲ್ಲೂಕಿನ ಭಂಕಲಗಾ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಭೀಮಾಶಂಕರ್ ಮೇತ್ರಿ ಅವರನ್ನು ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಅಮಾನತು ಮಾಡಿದ್ದಾರೆ.

ಶಿರವಾಳ ಗ್ರಾಮದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ನಿರ್ಬಂಧಿತ ಪ್ರದೇಶದಲ್ಲಿ ಶಿಕ್ಷಕರು ಓಡಾಡುತ್ತಿದ್ದರು. ಹೀಗಾಗಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರು ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕ ಭೀಮಾಶಂಕರ್‌ ಅವರನ್ನು ಡಿಡಿಪಿಐ ಅಮಾನತು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT