ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಫೊಟೆರಿಸಿನ್ ಬಿ ಅಕ್ರಮ ಮಾರಾಟ: ಪುಣೆ ಪೊಲೀಸರಿಂದ ಜಿಮ್ಸ್‌ ಸ್ಟಾಫ್ ನರ್ಸ್ ಬಂಧನ

Last Updated 14 ಜೂನ್ 2021, 16:25 IST
ಅಕ್ಷರ ಗಾತ್ರ

ಕಲಬುರ್ಗಿ: ಕಪ್ಪು ಶಿಲೀಂಧ್ರ ಸೋಂಕಿಗೆ ನೀಡಲಾಗುವ ಅಂಫೊಟೆರಿಸಿನ್ ಬಿ ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದಲ್ಲಿ ತೊಡಗಿಸಿಕೊಂಡ ಆರೋಪದ ಮೇರೆಗೆ ಮಹಾರಾಷ್ಟ್ರದ ಪುಣೆ ಪೊಲೀಸರು ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್‌) ಆಸ್ಪತ್ರೆಯಲ್ಲಿ ಸ್ಟಾಫ್‌ ನರ್ಸ್ ಆಗಿರುವ ರಾಜಕುಮಾರ ಭಜಂತ್ರಿ ಎಂಬುವವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಸೋಮವಾರ ನಗರಕ್ಕೆ ಬಂದ ಪೊಲೀಸರು ಗ್ರಾಮೀಣ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಬಾಸು ಚವ್ಹಾಣ ಅವರಿಗೆ ಆರೋಪಿಯನ್ನು ಬಂಧಿಸುವುದಾಗಿ ಮಾಹಿತಿ ನೀಡಿದ್ದಾರೆ.

‘ನಗರದ ಪಿ ಅಂಡ್‌ ಟಿ ಕ್ವಾರ್ಟರ್ಸ್‌ನಲ್ಲಿ ರಾಜಕುಮಾರ ವಾಸವಾಗಿದ್ದ. ಪುಣೆಯಲ್ಲಿ ಸಿಕ್ಕ ಮಾಹಿತಿ ಆಧರಿಸಿ ನಗರಕ್ಕೆ ಬಂದ ಪೊಲೀಸರ ತಂಡವು ರಾಜಕುಮಾರಗೆ ಕರೆ ಮಾಡಿ ನಗರದ ಹೊರವಲಯದ ಆಳಂದ ಚೆಕ್ ಪೋಸ್ಟ್ ಬಳಿಗೇ ಕರೆಸಿಕೊಂಡು ಅಲ್ಲಿಂದ ಕರೆದುಕೊಂಡು ಹೋಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಇನ್ನೂ ನಾಲ್ವರು ಆಸ್ಪತ್ರೆಯ ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರನ್ನೂ ತನಿಖಾ ತಂಡವು ವಿಚಾರಣೆಗೆ ಒಳಪಡಿಸಿತ್ತು. ಅವರನ್ನೂ ಬಂಧಿಸುವ ಸಾಧ್ಯತೆಗಳಿವೆ’ ಎಂದು ಜಿಮ್ಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT