ಶನಿವಾರ, ಫೆಬ್ರವರಿ 29, 2020
19 °C

ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ: ಡಿ.ಕೆ.ಶಿವಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಹುದ್ದೆಗೆ ನಾನು ಆಕಾಂಕ್ಷಿಯಲ್ಲ. ಹೀಗಾಗಿ ಅರ್ಜಿಯನ್ನೂ ಹಾಕಿಲ್ಲ ಎಂದು ಶಾಸಕ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧ್ಯಕ್ಷ ಹುದ್ದೆಗೆ ನಾನು ಆಕಾಂಕ್ಷಿಯೇ ಅಲ್ಲವಾದ್ದರಿಂದ ಯಾರೂ ನನ್ನ ಪ್ರಯತ್ನಕ್ಕೆ ಅಡ್ಡಗಾಲು ಹಾಕಿಲ್ಲ. ಸದ್ಯಕ್ಕೆ ಅಧ್ಯಕ್ಷರಾಗಿ ದಿನೇಶ್‌ ಗುಂಡೂರಾವ್ ಇದ್ದಾರೆ. ಅವರೇ ನಮ್ಮ ನಾಯಕರು. ಅವರು ಹೇಳಿದಂತೆ ಕೇಳುತ್ತೇವೆ’ ಎಂದರು.

ಶಾಸಕ ಡಾ.ಅಜಯ್‌ ಸಿಂಗ್‌ ಅವರ ಜನ್ಮದಿನ ಸಮಾರಂಭದಲ್ಲಿ ಶಿವಕುಮಾರ್‌ ಭಾಗವಹಿಸಿ ಅಲ್ಲಿಂದ ಯಾದಗಿರಿ ಜಿಲ್ಲೆಗೆ ತೆರಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು