ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೆ ಒತ್ತಾಯ

Last Updated 10 ಫೆಬ್ರುವರಿ 2020, 11:25 IST
ಅಕ್ಷರ ಗಾತ್ರ

ಕಮಲಾಪುರ: ಇಲ್ಲಿನ ಕೆರೆಗಳಿಗೆ ಮುಲ್ಲಾಮರಿ ನದಿಯಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ ಯೋಜನೆ ಜಾರಿಗೊಳಿಸುವಂತೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಕಮಲಾಪುರ ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ಸುಭಾಷ್ ಬಿರಾದಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕಮಲಾಪುರ ಸುತ್ತ ಅನೇಕ ಕೆರೆಗಳಿವೆ. ಈ ಕೆರೆಗಳಿಂದ ಸುಮಾರು 4,500 ಎಕರೆ ಜಮೀನು ನೀರಾವರಿಗೆ ಒಳಪಡುತ್ತದೆ. ಅನಾವೃಷ್ಟಿಯಿಂದ ಕೆರೆಗಳು ತುಂಬುತ್ತಿಲ್ಲ. ಮುಲ್ಲಾಮರಿ ನದಿಯಿಂದ ಈ ಕೆರೆಗಳಿಗೆ ನೀರು ಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೆ ಸುಮಾರು ₹125 ಕೋಟಿ ವೆಚ್ಚದಲ್ಲಿ ಅಣೆಕಟ್ಟೆ ನಿರ್ಮಿಸಿ ಪಂಪ್‌ ಹೌಸ್‌ ಸ್ಥಾಪಿಸಬೇಕು. ನಾಗೂರ, ನವನಿಹಾಳ, ನಾವದಗಿ ಉಪ ನಾಲೆಗಳಿಗೆ ಜಲಾನಯನ ಕ್ಷೇತ್ರದಲ್ಲಿ ಬರುವ ಎಲ್ಲ ಕೆರೆಗಳನ್ನು ತುಂಬಿಸಬಹುದು. ಮಲ್ಲಾಬಾದ್‌ ಏತ ನೀರಾವರಿ ಜಾರಿಗ ತಂದಿರುವ ಶ್ರೇಯಸ್ಸು ಮುಖ್ಯಮಂತ್ರಿಗಳಿಗೆ ಸಲ್ಲುತ್ತದೆ. ಈ ಯೋಜನೆ ಜಾರಿ ಗೊಳಿಸಿ ಈ ಭಾಗದ ಜನರ ಪಾಲಿಗೆ ಭಗೀರಥರಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT