ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ತಾಯಿ, ಮಕ್ಕಳ ಆಸ್ಪತ್ರೆ ವರ್ಚುವಲ್‌ ಉದ್ಘಾಟನೆ

ಕಲಬುರಗಿಯ ಶೇಖ್ ರೋಜಾ, ಜೇವರ್ಗಿಯಲ್ಲಿ ತಲಾ 100 ಬೆಡ್‌ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ
Published 25 ಫೆಬ್ರುವರಿ 2024, 16:17 IST
Last Updated 25 ಫೆಬ್ರುವರಿ 2024, 16:17 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಶೇಖ್‌ರೋಜಾ ಹಾಗೂ ಜೇವರ್ಗಿಯಲ್ಲಿ ನಿರ್ಮಾಣ ಮಾಡಲಾದ ತಲಾ 100 ಬೆಡ್‌ಗಳ ಸಾಮರ್ಥ್ಯಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ರಾಜಕೋಟ್‌ನಿಂದ ವರ್ಚುವಲ್‌ ಮೂಲಕ ಭಾನುವಾರ ಉದ್ಘಾಟಿಸಿದರು.

ನಗರದ ಶೇಖ್‌ರೋಜಾ ಬಡಾವಣೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಬಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್‌ ಸಿಂಗ್ ಮೀನಾ ಹಾಗೂ ಇತರ ಅಧಿಕಾರಿಗಳು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಜಿಲ್ಲಾ ಆರ್‌ಸಿಎಚ್‌ಒ ಡಾ.ಶರಣಬಸಪ್ಪ ಕ್ಯಾತನಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾದೇಶಿಕ ನಿರ್ದೇಶಕ ಡಾ. ರಾಜೇಶ ಕಡೇಮನಿ, ರಾಷ್ಟ್ರೀಯ ಕ್ಷಯರೋಗ ಸಂಸ್ಥೆಯ ನಿರ್ದೇಶಕ ಡಾ. ರವಿಚಂದ್ರ, ಜಿಲ್ಲಾ ಸರ್ವೇಕ್ಷಣೆ ಅಧಿಕಾರಿ ಡಾ.ಸುರೇಶ ಮೇಕಿನ, ಶಿವಾಜಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂಧ್ಯಾರಾಣಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೇಣುಗೋಪಾಲ, ಮಾಣಿಕ ಕನಕಟ್ಟಿ, ಡಿಪಿಎಂ ವಿರೇಶ, ಕಾರ್ಣಿಕ ಕೋರೆ ಇತರರು ಭಾಗವಹಿಸಿದ್ದರು.

ಚಾಮರಾಜ ದೊಡಮನಿ ನಿರೂಪಿಸಿದರು. ಶೇಖ ರೋಜಾ ಬಡಾವಣೆಯ ನಾಗರಿಕರು, ಆಶಾ ಕಾರ್ಯಕರ್ತೆಯರು ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಇದೇ ವೇಳೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಬಿ, ಅವರು ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಕಾರ್ಯಾರಂಭವಾಗುವ ಮೊದಲು ಆಸ್ಪತ್ರೆಯ ಎಲ್ಲ ವಾರ್ಡ್‌ಗಳಲ್ಲಿ ಸಾನಿಟೈಸ್‌ ಮಾಡಿಬೇಕು. ಬಾಕಿ ಕಾಮಗಾರಿ ಬೇಗ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಡಾವಣೆಯ ಕೆಲ ನಿವಾಸಿಗಳು ಜಿಲ್ಲಾಧಿಕಾರಿ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಡಿ ಗ್ರೂಪ್ ಕೆಲಸವನ್ನು ನೀಡಬೇಕು ಎಂದು ಮನವಿ ಮಾಡಿದರು.

ಕಲಬುರಗಿ ರೋಡ್‌ ಶೇಖ್‌ರೋಜಾ ಬಳಿ ನೂತನವಾಗಿ ನಿರ್ಮಿಸಲಾದ 100 ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು
ಕಲಬುರಗಿ ರೋಡ್‌ ಶೇಖ್‌ರೋಜಾ ಬಳಿ ನೂತನವಾಗಿ ನಿರ್ಮಿಸಲಾದ 100 ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT