ಬುಧವಾರ, ಸೆಪ್ಟೆಂಬರ್ 30, 2020
21 °C

ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರೋತ್ಸಾಹ ಧನ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಸಮೃದ್ಧಿ ಯೋಜನೆ ಅಡಿ ಭಂಕೂರ, ಮಾಲಗತ್ತಿ ಹಾಗೂ ಕಾಳನೂರು ಗ್ರಾಮಗಳಲ್ಲಿ ಬೀದಿ ವ್ಯಾಪಾರಿಗಳಿಗೆ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಅವರು ₹ 10 ಸಾವಿರ ಪ್ರೋತ್ಸಾಹ ಧನದ ಚೆಕ್‌ಗಳನ್ನು ವಿತರಿಸಿದರು.

ನಿಗಮದಿಂದ ಬಡ ಮಹಿಳೆಯರಿಗೆ, ಬೀದಿ ವ್ಯಾಪಾರಿಗಳಿಗೆ ಆರ್ಥಿಕ ಸೌಲಭ್ಯ ಕಲ್ಪಿಸುವ ಹಲವು ಯೋಜನೆಗಳಿವೆ. ಹೀಗಾಗಿ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ಟೆಂಗಳಿ ಹೇಳಿದರು.

ಭಂಕೂರ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದರು.

ಬಿ.ಜೆ.ಪಿ ತಾಲೂಕು ಘಟಕದ ಅಧ್ಯಕ್ಷ ನಿಲಕಂಠರಾವ ಪಾಟೀಲ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಇಟಗಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮಿ, ತಾ.ಪಂ. ಸದಸ್ಯ ಶರಣಪ್ಪ ಸಣಬೂ, ಮುಖಂಡರಾದ ಶಶಿಕಾಂತ ಪಾಟೀಲ, ಭರತ, ಗೋಪಾಲ, ಕಾಳನೂರು ಮುಖಂಡರಾದ ಪ್ರಭುಗೌಡ ಪಾಟೀಲ, ಶ್ರೀಶೈಲ ನಾಟೆಕಾರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.