ಗುರುವಾರ , ಜನವರಿ 27, 2022
27 °C

ಕಲಬುರಗಿ | ‘ಪ್ರೋತ್ಸಾಹ ಧನ ಸಮಸ್ಯೆ ಸರಿಪಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಕೋವಿಡ್ ಸಂದರ್ಭದಲ್ಲಿ ಜಿಮ್ಸ್‌ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ‘ಡಿ’ ದರ್ಜೆ ನೌಕರರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ತಾರತಮ್ಯ ಮಾಡಲಾಗಿದೆ. ಅದನ್ನು ಸರಿಪಡಿಸಿ ಎಲ್ಲರಿಗೂ ಪ್ರೋತ್ಸಾಹ ಧನ ನೀಡಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗ್ರೂಪ್‌ ‘ಡಿ’ ನೌಕರರ ಸಂಘದ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕೋವಿಡ್‌ ಆರೈಕೆ ಕೇಂದ್ರದಲ್ಲಿ ಪಿಪಿಇ ಕಿಟ್‌ ಧರಿಸಿ ಸೇವೆ ಸಲ್ಲಿಸಿದ ಗ್ರೂಪ್‌ ಡಿ ನೌಕರರಿಗೆ ತಿಂಗಳಿಗೆ ₹10 ಸಾವಿರದಂತೆ 6 ತಿಂಗಳು ಪ್ರೋತ್ಸಾಹ ಧನ ನೀಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಜಿಮ್ಸ್‌ನಲ್ಲಿ ಕೆಲವರಿಗೆ ಮಾತ್ರ ನೀಡಲಾಗಿದೆ. ಅರ್ಹತೆ ಇದ್ದರೂ ಇನ್ನು ಕೆಲವರಿಗೆ ವಿತರಣೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಬಸವರಾಜ ಬಿ.ನೆಲೋಗಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.