ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ

Published 6 ಮೇ 2023, 19:37 IST
Last Updated 6 ಮೇ 2023, 19:37 IST
ಅಕ್ಷರ ಗಾತ್ರ

ಕಲಬುರಗಿ: ನಗರದ ನೂರ್‌ಬಾಗ್ ಕಾಲೊನಿಯ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಜಿಲ್ಲಾ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ವಿಭಾಗದ ಮಾಜಿ ಅಧ್ಯಕ್ಷ ವಾಹೇದ್ ಅಲಿ ಫಾತೆಖಾನಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದರು.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮನೆಯಲ್ಲಿ ತಪಾಸಣೆ ನಡೆಸಿದ ಐಟಿ ಅಧಿಕಾರಿಗಳು, ದಾಖಲಾತಿಗಳು, ಬ್ಯಾಂಕ್‌ ಪಾಸ್‌ಬುಕ್ ತಪಾಸಣೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ವಶಕ್ಕೆ ಪಡೆದ ಸ್ವತ್ತು, ಆಸ್ತಿಯ ಪ್ರಮಾಣ ಬಹಿರಂಗ ಪಡಿಸಿಲ್ಲ.

ವಾಹೇದ್‌ ಅಲಿ ಅವರು ಮಾಜಿ ಸಚಿವ ದಿ. ಖಮರುಲ್‌ ಇಸ್ಲಾಂ ಅವರ ಆಪ್ತರಾಗಿದ್ದು, ಅವರ ಹಣಕಾಸಿನ ವ್ಯವಹಾರ, ಚುನಾವಣೆ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಶಾಸಕಿ ಕನೀಜ್‌ ಫಾತೀಮ್ ಅವರ ಗೆಲುವಿನಲ್ಲಿ ವಾಹೇದ್ ಅಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಅವರು ಗುಲಬರ್ಗಾ ವಿಶ್ವವಿದ್ಯಾಲಯ ಸಿಂಡಿಕೇಟ್‌ನ ಮಾಜಿ ಸದ್ಯಸ್ಯರೂ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT