ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಣೀಯ: ಪ್ರಭುರೆಡ್ಡಿ

Published : 16 ಆಗಸ್ಟ್ 2024, 4:17 IST
Last Updated : 16 ಆಗಸ್ಟ್ 2024, 4:17 IST
ಫಾಲೋ ಮಾಡಿ
Comments

ಸೇಡಂ: ‘ಬ್ರಿಟಿಷರಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಣೀಯ’ ಎಂದು ಉಪವಿಭಾಗಾಧಿಕಾರಿ ಪ್ರಭುರೆಡ್ಡಿ ಅಭಿಪ್ರಾಯಪಟ್ಟರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಸ್ವಾತಂತ್ರ್ಯದ ಮಹತ್ವವನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕು. ಯುವಕರು, ಸ್ವಾತಂತ್ರ್ಯದಷ್ಟೇ ಸಂವಿಧಾನ ನೀಡಿರುವ ಮೂಲಭೂತ ಕರ್ತವ್ಯ ಪಾಲಿಸಬೇಕು. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ನಿಭಾಯಿಸಬೇಕು. ಅಂದಾಗ ಮಾತ್ರ ಸುಂದರ ಸಮಾಜ ನಿರ್ಮಾಣವಾಗುತ್ತದೆ’ ಎಂದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶಂಕ್ರಯ್ಯಾಸ್ವಾಮಿ ಇಮಡಾಪುರ ಮಾತನಾಡಿದರು.

ತಹಶೀಲ್ದಾರ್ ಶ್ರೀಯಾಂಕ ಧನಶ್ರೀ ಮಾತನಾಡಿ, ‘ವಿದ್ಯಾರ್ಥಿಗಳು ಹೆಚ್ಚು ಅಧ್ಯಯನ ಮಾಡಿ, ಜೀವನದಲ್ಲಿ ಇಟ್ಟುಕೊಂಡ ಗುರಿಯನ್ನು ಸಾಧಿಸಬೇಕು’ ಎಂದರು. ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ, ಸತ್ಕರಿಸಲಾಯಿತು.

ವಿದ್ಯಾರ್ಥಿಗಳ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಗ್ರೇಡ್-2 ತಹಶೀಲ್ದಾರ್ ಸಿದ್ರಾಮ ನಾಚವಾರ್, ತಾ.ಪಂ. ಇಒ ಚನ್ನಪ್ಪ ರಾಯಣ್ಣನವರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ಪಾಟೀಲ, ವೈ.ಎಲ್.ಹಂಪಣ್ಣ, ಬಿ.ಎಸ್.ಹೊಸ್ಮನಿ, ಬಸವರಾಜ ಕಲೋಜಿ, ಶರಣಯ್ಯಸ್ವಾಮಿ, ಶಿವಕುಮಾರ, ಹಸನ್ ಚಾವೂಸ್, ಇಮ್ರಾನ್ ಮನಿಯಾರ್, ಸಂತೋಷ ಕುಲಕರ್ಣಿ ಹಾಜರಿದ್ದರು. ಕ್ಷೇತ್ರಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಸ್ವಾಗತಿಸಿದರು. ಶ್ರೀನಿವಾಸ ಕುಲಕರ್ಣಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT