ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾರತದ ಪ್ರಗತಿ ಎಲ್ಲರ ಜವಾಬ್ದಾರಿ’

Last Updated 15 ಆಗಸ್ಟ್ 2022, 16:52 IST
ಅಕ್ಷರ ಗಾತ್ರ

ಕಲಬುರಗಿ: ‘ಭಾರತದ ಪ್ರಗತಿ ಕೇವಲ ಸರ್ಕಾರದ ಹೊಣೆಯಲ್ಲ. ಪ್ರತಿ ಪ್ರಜೆಯೂ ದೇಶದ ಏಳಿಗೆಗಾಗಿ ಶ್ರಮಿಸಬೇಕು’ ಎಂದು ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದ ಸಮ ಕುಲಾಧಿಪತಿ ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಹೇಳಿದರು.

ನಗರದ ಕೆಬಿಎನ್ ವಿ.ವಿ.ಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿ.ವಿ. ಉಪ ಕುಲಪತಿ ಡಾ. ಅಲಿ ರಜಾ ಮೂಸ್ವಿ ಮಾತನಾಡಿ, ದೇಶ ಸ್ವಾತಂತ್ರ್ಯ ಪಡೆದ ನಂತರ ಪ್ರಜೆಗಳ ಜವಾಬ್ದಾರಿ ಹೆಚ್ಚಿದೆ. ರಾಷ್ಟ್ರ ಕಟ್ಟುವಲ್ಲಿ ಎಲ್ಲ ಪ್ರಜೆಗಳು ಭಾಗವಹಿಸಬೇಕು. ಅಮರ್ಥ್ಯಸೇನ್ ಪ್ರಕಾರ ಸ್ವತಂತ್ರ ಎಂದರೆ ಕೇವಲ ಮನಸೋ ಇಚ್ಛೆ ನಡೆದುಕೊಳ್ಳುವುದಲ್ಲ. ಆಯ್ಕೆ ಮಾಡುವ ಸಾಮರ್ಥ್ಯ ಮತ್ತು ಅವಕಾಶ ದೊರೆಯುವುದೇ ಸ್ವಾತಂತ್ರ್ಯ, ಶಿಕ್ಷಣ ಮಾಹಿತಿ ಮತ್ತು ಸರಿಯಾದ ನಡವಳಿಕೆಯಿಂದ ಒಳ್ಳೆಯ ಪ್ರಜೆಗಳನ್ನಾಗಿ ಮಾಡಬಹುದು. ಖಾಜಾ ಬಂದನಾವಾಜ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ಭಾರತದ ಉತ್ತಮ ಪ್ರಜೆಯನ್ನಾಗಿ ಮಾಡುವಲ್ಲಿ ನಿರತವಾಗಿದೆ’ ಎಂದರು.

ಸಯ್ಯದ್ ಅಕ್ಬರ್ ಹುಸೇನಿ ಶಾಲೆಯ ಎನ್‌ಸಿಸಿ ಘಟಕದ ವಿದ್ಯಾರ್ಥಿಗಳು ಪಥ ಸಂಚಲನ ಮಾಡಿದರು.

ಕುಲಸಚಿವೆ ಡಾ.ರುಕ್ಸಾರ ಫಾತಿಮಾ, ವೈದ್ಯಕೀಯ ನಿಕಾಯದ ಡೀನ ಡಾ.ಸಿದ್ದೇಶ್ ಸಿರವಾರ, ಕಲಾ ನಿಕಾಯದ ಡೀನ್ ಡಾ. ನಿಶಾತ್ ಆರೀಫ್ ಹುಸೇನಿ, ಹಣಕಾಸು ಅಧಿಕಾರಿ ಲತೀಫ್ ಷರೀಫ್, ಕೆಬಿಎನ್ ಅಡಿ ಬರುವ ಎಲ್ಲ ವಿದ್ಯಾ ಸಂಸ್ಥೆಗಳ ಬೋಧಕ, ಬೋಧಕೇತರ ವರ್ಗ ಹಾಗೂ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆಬಿಎನ್ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ದೇಶ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT