ಗುರುವಾರ , ಜುಲೈ 29, 2021
21 °C

ಆಂಬುಲೆನ್ಸ್‌ನಲ್ಲಿ ಹೆರಿಗೆ: ಮಗು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೇಡಂ: ಪಟ್ಟಣದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗರ್ಭಿಣಿಗೆ ಆಂಬುಲೆನ್ಸ್‌ನಲ್ಲಿ ಹೆರಿಗೆಯಾಗಿ ಮಗು ಮೃತಪಟ್ಟಿರುವ ಘಟನೆ ಭಾನುವಾರ ಜರುಗಿದೆ.

ಪಟ್ಟಣದ ಮರಿಯಾ ಅಶೋಕ (35) ಅವರು ಜೂನ್ 11ರಂದು ಪುಣೆಯಿಂದ ಸೇಡಂಗೆ ಬಂದಿದ್ದರು. ಅಂದೇ ಅವರಿಗೆ ಪಟ್ಟಣದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸೋಮವಾರ ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ವೈದ್ಯರು ನೇರವಾಗಿ ಕಲಬುರ್ಗಿಗೆ ಕರೆದೊಯ್ಯುವಂತೆ ಸೂಚಿಸಿದ್ದರು.

ಅಂಬುಲೆನ್ಸ್‌ನಲ್ಲಿ ಕಲಬುರ್ಗಿಗೆ ಕರೆದೊಯ್ಯುವ ದಾರಿ ಮಧ್ಯೆ ಮರಿಯಾ ಗಂಡುಮಗುವಿಗೆ ಜನ್ಮನೀಡಿದ್ದಾರೆ. ದುರದೃಷ್ಟವಶಾತ್ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿತು. ನಂತರ ಮಹಿಳೆಯನ್ನು ಕಲಬುರ್ಗಿಯ ಜೀಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು