ಗುರುವಾರ , ಅಕ್ಟೋಬರ್ 22, 2020
24 °C

ಇಂಗಳಗಿ- ಶಹಾಬಾದ್ ರಸ್ತೆ ತಾತ್ಕಾಲಿಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಡಿ: ಸತತ ಮಳೆಯಿಂದ ಕಾಗಿಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂಗಳಗಿ– ಶಹಾಬಾದ್‌ ನಡುವಿನ ರಸ್ತೆಯನ್ನು ಗುರುವಾರ ಸಂಜೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಜನರು ಸಂಚರಿಸದಂತೆ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಗೂ ಮುಳ್ಳುಕಂಟಿಗಳನ್ನು ಹಾಕಲಾಗಿದೆ.

ಬೆಣ್ಣೆತೊರಾ ಜಲಾಶಯದಿಂದ 12 ಸಾವಿರ ಕ್ಯುಸೆಕ್ ನೀರು ಬಿಟ್ಟಿರುವುದರಿಂದ ನದಿಯಲ್ಲಿ ಪ್ರವಾಹ ಭಾರೀ ಹೆಚ್ಚಳವಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದೆ. ನದಿಗೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. ಇಂಗಳಗಿ, ಕಡಬೂರು, ಕುಂದನೂರು ಸಹಿತ ನದಿ ದಂಡೆಯ ಜನರು ಅತ್ಯಂತ ಜಾಗೃತೆಯಿಂದ ಇರಬೇಕು. ಈ ರಸ್ತೆಯ ಮೇಲೆ ಸಂಚರಿಸುವ ಸಾಹಸ ಮಾಡಬಾರದು ಎಂದು ಸ್ಥಳೀಯ ಪಿಎಸ್ಐ ವಿಜಯಕುಮಾರ ಭಾವಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು