ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಕೆಕೆಆರ್‌ಡಿಬಿ ನೀತಿಯಿಂದ ಅನ್ಯಾಯ: ಜಿಲ್ಲಾ ಗುತ್ತಿಗೆದಾರರ ಸಂಘ ಆರೋಪ

Published 6 ಫೆಬ್ರುವರಿ 2024, 16:21 IST
Last Updated 6 ಫೆಬ್ರುವರಿ 2024, 16:21 IST
ಅಕ್ಷರ ಗಾತ್ರ

ಕಲಬುರಗಿ: ‘ಕೆಕೆಆರ್‌ಡಿಬಿ ಕಾಮಗಾರಿಗಳನ್ನು ಪ್ಯಾಕೇಜ್‌ ಪದ್ಧತಿಯಲ್ಲಿ ಕರೆಯಬಾರದು ಎಂದು ಹೈಕೋರ್ಟ್‌ ಆದೇಶವಿದ್ದರೂ ಅಧಿಕಾರಿಗಳು ಟೆಂಡರ್‌ ಕರೆಯುತ್ತಿದ್ದಾರೆ. ಉಳಿದ ಕಾಮಗಾರಿಗಳನ್ನು ಟೆಂಡರ್ ಕರೆಯದೇ ಭೂ ಸೇನಾ ನಿಗಮಕ್ಕೆ ವಹಿಸುತ್ತಿದ್ದಾರೆ. ಇದರಿಂದ ಕೆಕೆಆರ್‌ಡಿಬಿ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ’ ಎಂದು ಜಿಲ್ಲಾ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಆರೋಪಿಸಿದೆ.

ಈ ಬಗ್ಗೆ ಮಂಗಳವಾರ ಸಭೆ ನಡೆಸಿದ ಸಂಘದ ಮುಖಂಡರು, ‘ಕೆಕೆಆರ್‌ಡಿಬಿಯ ಈ ನೀತಿಯಿಂದ ಗುತ್ತಿಗೆದಾರರಿಗೆ ಕೆಲಸವಿಲ್ಲದಂತಾಗಿದೆ. ಹಿಂದೆ ಮಾಡಿದ ಕಾಮಗಾರಿಗಳ ಬಿಲ್‌ ಸಹ ಪಾವತಿಸಿಲ್ಲ. ಹಿಂದಿನ ಸರ್ಕಾರದಲ್ಲಿ ಬಾಕಿ ಇರುವ ಎಲ್ಲ ಬಿಲ್‌ಗಳನ್ನು ಪಾವತಿಸುತ್ತೇವೆ ಎಂದು ನಮ್ಮ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರ ಮುಂದೆ ಹೇಳಿದ್ದೀರಿ. ಬಳಿಕ ನಿಮಗೆ ಅನೇಕ ಸಲ ಮನವಿ ಸಲ್ಲಿಸಿದ್ದೇವೆ. ಕೆಕೆಆರ್‌ಡಿಬಿ ಗುತ್ತಿಗೆದಾರರಿಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಗಮನ ಹರಿಸಿ ನ್ಯಾಯ ಒದಗಿಸಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್‌ ಸಿಂಗ್, ಸಚಿವ ಎನ್‌.ಎಸ್.ಬೋಸರಾಜು ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT