ಕಲಬುರಗಿ: ‘ಒಳ ಮೀಸಲಾತಿ ಜಾರಿ ಮಾಡದ ರಾಜ್ಯ ಸರ್ಕಾರದ ನಡೆ ವಿರೋಧಿಸಿ ಅ.16ರಂದು ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಅರೆಬೆತ್ತಲೆ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು’ ಎಂದು ಜಿಲ್ಲಾ ಮಾದಿಗ ಸಮಾಜ ಸಂಘಟನೆಗಳ ಒಕ್ಕೂಟದ ಮುಖಂಡ ಭೀಮಣ್ಣ ಬಿಲ್ಲವ್ ತಿಳಿಸಿದರು.

‘ಸುಪ್ರೀಂ ಕೋರ್ಟ್ ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಒಪ್ಪಿಗೆ ನೀಡಿದೆ. ಒಳ ಮೀಸಲಾತಿ ಜಾರಿ ರಾಜ್ಯಗಳ ವಿವೇಚನಾ ಅಧಿಕಾರ ಎಂದು ತಿಳಿಸಿದೆ. ಅಲ್ಲದೆ, ಈ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ವಜಾ ಮಾಡಿದೆ. ಇತರ ರಾಜ್ಯಗಳು ಒಳ ಮೀಸಲಾತಿ ಜಾರಿಗೆ ತಯಾರಿ ಮಾಡಿಕೊಳ್ಳುತ್ತಿವೆ. ಆದರೆ ನಮ್ಮ ಸರ್ಕಾರ ಉದಾಸೀನ ಮಾಡುತ್ತಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಆರೋಪಿಸಿದರು.

ಮುಖಂಡ ಗೋಪಾಲ ಕಟ್ಟಿಮನಿ ಮಾತನಾಡಿ, ‘ವಿಧಾನಸಭಾ ಚುನಾವಣೆ ವೇಳೆ ಸಾಮಾಜಿಕ ನ್ಯಾಯ ನೀಡಲು ಬದ್ಧ ಎಂದು ಕಾಂಗ್ರೆಸ್ ತಿಳಿಸಿತ್ತು. ಅದನ್ನು ಪ್ರಣಾಳಿಕೆಯಲ್ಲೂ ಪ್ರಸ್ತಾಪ ಮಾಡಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸರಿಯಲ್ಲ’ ಎಂದರು.

ಮುಖಂಡ ಶ್ಯಾಮ್ ನಾಟೇಕರ್ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆಯವರು ಒಳ ಮೀಸಲಾತಿ ಜಾರಿಯ ಸಾಧಕ–ಬಾಧಕಗಳ ಕುರಿತು ತಿಳಿದುಕೊಳ್ಳಲು ಉಪಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ. ಕೋರ್ಟ್ ಆದೇಶ ನೀಡಿದ ಮೇಲೂ ಈ ತರಹ ಮಾತನಾಡುವುದು ಸರಿಯಲ್ಲ. ಒಳ ಮೀಸಲಾತಿ ಮಾದಿಗರ ಹಕ್ಕು. ಅದನ್ನು ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ರಾಜು ಕಟ್ಟಿಮನಿ, ರಾಜು ಹದನೂರ, ಚಂದ್ರಕಾಂತ ನಾಟೇಕರ್, ವಿಜಯಕುಮಾರ ಅಡಕಿ ಸೇರಿ ಹಲವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.