ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ತೊಗರಿ ವಿಮೆ: 31 ಕೊನೆಯ ದಿನಾಂಕ

Last Updated 28 ಜುಲೈ 2021, 6:58 IST
ಅಕ್ಷರ ಗಾತ್ರ

ಕಲಬುರ್ಗಿ: ಮುಂಗಾರು ಹಂಗಾಮಿಗೆ ಜಿಲ್ಲೆಯ ಪ್ರಮುಖ ಬೆಳೆಯಾದ ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ) ಬೆಳೆಗೆ ಬೆಳೆವಿಮೆ ನೋಂದಣಿ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗುರ ತಿಳಿಸಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜೆನರಲ್ ಇನ್ಸೂರೆನ್ಸ್‌ ಕಂಪನಿಗೆ ವಹಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಧಳ, ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಪೋಟ ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ... ಮುಂತಾದ ಸಂದರ್ಭದಲ್ಲಿ ಬೆಳೆ ನಷ್ಟವಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದು.

ರೈತರು ಉಳಿದ ಬೆಳೆಗಳ ಆಯ್ಕೆಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೋಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಪರ್ಕಿಸಬೇಕು.

ಅತಿ ಮಳೆ, ಪ್ರವಾಹದಿಂಗಾಗಿ ಬೆಳೆ ಹಾನಿಯಾದ ಕುರಿತು ಈಗಾಗಲೇ ವಿಮೆ ಮಾಡಿಸಿದ ರೈತರು 72 ಗಂಟೆಯೊಳಗೆ ಸಹಾಯವಾಣಿ ಸಂಖ್ಯೆ 1800-200-5142 ಕರೆ ಮಾಡಿ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT