ಯುವಜನೋತ್ಸವದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು
ಭಾರತವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು ನಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ನಮ್ಮಲ್ಲೇ ಬಗೆಹರಿಸಿಕೊಂಡು ಮುನ್ನಡೆಯೋಣ. ಬಸವಣ್ಣ ಗಾಂಧೀಜಿ ಅಂಬೇಡ್ಕರ್ ಹಾಗೂ ಸಂವಿಧಾನವೇ ನಮಗೆ ದಾರಿ ದೀಪ
ಪ್ರಕಾಶ್ ರಾಜ್ ಬಹುಭಾಷಾ ನಟ
500ಕ್ಕೂ ಅಧಿಕ ಸ್ಪರ್ಧಿಗಳು
ಅಂತರ ಮಹಾವಿದ್ಯಾಲಯ ಯುವಜನೋತ್ಸವದಲ್ಲಿ ಗುಲಬರ್ಗಾ ವಿ.ವಿ. ವ್ಯಾಪ್ತಿಯ 25 ಕಾಲೇಜುಗಳ 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣ ಮಹಾತ್ಮ ಗಾಂಧಿ ಸಭಾಂಗಣ ಸೇರಿದಂತೆ ವಿವಿಧೆಡೆ ಹಲವು ಸ್ಪರ್ಧೆಗಳು ನಡೆಯಲಿವೆ. ಡಿಸೆಂಬರ್ 22ರಂದು ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದ್ದು ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ.