ಶುಕ್ರವಾರ, ಜನವರಿ 27, 2023
27 °C

ಡಿಸಿಸಿ ಬ್ಯಾಂಕ್‌ನಿಂದ ಠೇವಣಿಗೆ ಶೇ 8.5ರಷ್ಟು ಬಡ್ಡಿ: ರಾಜಕುಮಾರ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಇಲ್ಲಿನ ಕಲಬುರಗಿ–ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಪ್ರಸಕ್ತ ಠೇವಣಿ ಮೇಲೆ ಆಕರ್ಷಕ ಬಡ್ಡಿ ನೀಡುವ ಯೋಜನೆ ಜಾರಿಗೆ ತಂದಿದೆ ಎಂದು ಬ್ಯಾಂಕ್ ಅಧ್ಯಕ್ಷ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

‘ಬ್ಯಾಂಕ್‌ನಲ್ಲಿ ಠೇವಣಿ ಇಡುವ ಗ್ರಾಹಕರಿಗೆ ಶೇ 8.5ರಷ್ಟು ಬಡ್ಡಿ ನೀಡುವ ಮಹೋನ್ನತ ಯೋಜನೆ ಜಾರಿಗೆ ತರಲಾಗಿದೆ. ಬ್ಯಾಂಕ್ ₹ 19 ಕೋಟಿ ಲಾಭ ಗಳಿಸಿದೆ.‌ ಹೀಗಾಗಿ ಠೇವಣಿ ಇಡುವ ಗ್ರಾಹಕರಿಗೆ ಲಾಭ ಮಾಡಿಕೊಡಲು ಬ್ಯಾಂಕ್ ಮುಂದಾಗಿದೆ.‌ ಇದೇ ಕಾರಣಕ್ಕೆ ಠೇವಣಿ ಮೇಲೆ ಹೆಚ್ಚಿನ ಬಡ್ಡಿ ದರ ನೀಡುವ ಯೋಜನೆ ರೂಪಿಸಲಾಗಿದೆ. ಅಪೆಕ್ಸ್ ಬ್ಯಾಂಕ್, ನಬಾರ್ಡ್ ವಿಶ್ವಾಸ ಗಳಿಸಿದ್ದರಿಂದ ಡಿಸಿಸಿ ಬ್ಯಾಂಕ್‌ಗೆ ಇಲ್ಲಿಯವರೆಗೆ ₹ 375 ಕೋಟಿ ಠೇವಣಿ ಹರಿದು ಬಂದಿದೆ. 2023ರ ಮಾರ್ಚ್ ಅಂತ್ಯದವರೆಗೆ ₹ 600 ಕೋಟಿ ಠೇವಣಿ ಹೊಂದುವ ಬಗ್ಗೆ ನಿರೀಕ್ಷೆ ಹೊಂದಲಾಗಿದೆ’ ಎಂದಿದ್ದಾರೆ.

‘ಬ್ಯಾಂಕಿನಿಂದ ಪ್ರಸಕ್ತ ₹ 1 ಸಾವಿರ ಕೋಟಿ ಸಮೀಪ ರೈತರಿಗೆ ಬಡ್ಡಿ ರಹಿತ ಬೆಳೆ ಸಾಲ ನೀಡಲಾಗಿದೆ. ಮಹಿಳಾ ಸ್ವ ಸಹಾಯ ಸಂಘಗಳಿಗೆ ₹ 50 ಕೋಟಿ ಸಾಲ ನೀಡಲಾಗಿದೆ. ಹೈನುಗಾರರಿಗೆ ಸಾಲ ನೀಡುವುದನ್ನು ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ಹೊಸ ಶಾಖೆಗಳನ್ನು ಪ್ರಾರಂಭಿಸುವುದು ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು