ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿ ಪರ ಕೆಲಸ ಮಾಡುತ್ತಿರುವ ಚುನಾವಣಾ ಆಯೋಗ’

ಅನರ್ಹ ಶಾಸಕರು ಸ್ಪರ್ಧಿಸಲು ಅವಕಾಶವಿದೆ ಎಂದ ಆಯೋಗದ ಕ್ರಮಕ್ಕೆ ಖಂಡ್ರೆ ಟೀಕೆ
Last Updated 24 ಸೆಪ್ಟೆಂಬರ್ 2019, 10:36 IST
ಅಕ್ಷರ ಗಾತ್ರ

ಕಲಬುರ್ಗಿ: ‘ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧಿಸಲು ಯಾವುದೇ ತಕರಾರು ಇಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಇದು ನಿದರ್ಶನ’ ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದರು.

ನಗರದಲ್ಲಿ ಸೋಮವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂಕೋರ್ಟ್ ಇನ್ನೂ ವಿಚಾರಣೆ ನಡೆಸುತ್ತಿದೆ. ನ್ಯಾಯಾಲಯ ಕೇಳಿಲ್ಲದಿರುವಾಗ, ಆಯೋಗವೇ ಆಸಕ್ತಿ ವಹಿಸಿ ಪ್ರಮಾಣ ಪತ್ರ ಸಲ್ಲಿಸಿದ್ದು ಸರಿಯಲ್ಲ. ಇಂತಹ ವಿಷಯಗಳಲ್ಲಿ ಚುನಾವಣಾ ಆಯೋಗ ತಟಸ್ಥವಾಗಿರಬೇಕು’ ಎಂದರು.

ಇನ್ನೊಂದೆರಡು ಸುತ್ತಿನ ಸಭೆಗಳನ್ನು ನಡೆಸಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಖಂಡ್ರೆ ತಿಳಿಸಿದರು.

ಆಮಿಷಗಳಿಗೆ ಬಲಿಯಾಗಿ, ಕಾಂಗ್ರೆಸ್‍ಗೆ ದ್ರೋಹ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅನಗತ್ಯ ಚುನಾವಣೆಯನ್ನು ಜನರ ಮೇಲೆ ಹೇರಿದ್ದಾರೆ. ಆ ಕ್ಷೇತ್ರದ ಜನರು ಇವರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು.

ಬಿಜೆಪಿ ಹಿಂಬಾಗಿಲಿನಿಂದ ಸರ್ಕಾರ ರಚನೆ ಮಾಡಿದ್ದು, ಉಪ ಚುನಾವಣೆ ಬಳಿಕ ಸರ್ಕಾರ ಪತನಗೊಳ್ಳಲಿದೆ. ಎಲ್ಲ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದರೂ ಪರಿಹಾರ ನೀಡದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕದ ಹ್ಯೂಸ್ಟನ್‍ನಲ್ಲಿ ಕಾರ್ಯಕ್ರಮಕ್ಕೆ ಹೋಗಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದೂ ಖಂಡ್ರೆ ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT