ಕಲಬುರಗಿ: ‘ಬಿಜೆಪಿಯವರು ದುರುದ್ದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನು ಖಂಡಿಸುತ್ತೇವೆ’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಪ್ರಿಯಾಂಕ್ ಖರ್ಗೆಯವರು ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ವಿರೋಧ ಪಕ್ಷಗಳು ಅಭಿವೃದ್ಧಿ ಕೆಲಸಕ್ಕೆ ಸಹಕಾರ ನೀಡಬೇಕು. ಅದು ಅವರ ಕರ್ತವ್ಯ. ಅದು ಬಿಟ್ಟು ಪ್ರತಿಭಟನೆ ನಡೆಸುವುದು ಸರಿಯಲ್ಲ. ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಹೈಕಮಾಂಡ್ ಸತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯಾಧ್ಯಕ್ಷರ ವಿರುದ್ಧ ಬಿಜೆಪಿಯವರೇ ಬಹಿರಂಗವಾಗಿ ಹೇಳಿಕೆ ನೀಡುತ್ತಾರೆ. ಬೈಯ್ಯುತ್ತಾರೆ. ಅವರನ್ನು ಉಚ್ಛಾಟನೆ ಮಾಡದ ಬಿಜೆಪಿ ಹೈಕಮಾಂಡ್ ಸತ್ತಿದೆಯೇ’ ಎಂದು ಪ್ರಶ್ನಿಸಿದ್ದಾರೆ.

‘ಅಂಬೇಡ್ಕರ್ ಅವರ ಕುರಿತು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಮರೆಸಲು ಆಧಾರವಿಲ್ಲದೆ ಪ್ರತಿಭಟನೆ ಮಾಡಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

‘2023ರ ವಿಧಾನಸಭಾ ಚುನಾವಣೆಯಲ್ಲಿಯೂ ಪ್ರಿಯಾಂಕ್ ಖರ್ಗೆ ಅವರನ್ನು ಗುರಿ ಮಾಡಿ ಚಿತ್ತಾಪುರ ಕ್ಷೇತ್ರದಲ್ಲಿ ಅವರನ್ನು ಸೋಲಿಸಬೇಕು ಎಂದು ಶತಾಯಗತಾಯ ಪ್ರಯತ್ನ ಮಾಡಿದರು. ಆದರೆ ಆ ಕ್ಷೇತ್ರದ ಮತದಾರರು ಪ್ರಿಯಾಂಕ್ ಖರ್ಗೆಯವರನ್ನು ಗೆಲ್ಲಿಸಿದ್ದಾರೆ. ಆಧಾರವಿಲ್ಲದ ಇಂಥ ಪ್ರತಿಭಟನೆ ಮಾಡಿದರೆ ನಾವು ಬಗ್ಗುವವರಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.