ಗುರುವಾರ , ಡಿಸೆಂಬರ್ 5, 2019
20 °C

ಅನರ್ಹ ಶಾಸಕರ ಸೋಲು- ಗೆಲುವನ್ನು ಜನ ನಿರ್ಧರಿಸುತ್ತಾರೆ ಎಂದ ಜಗದೀಶ್ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದು, ಗೆಲ್ಲಿಸುವುದು ಕಾಂಗ್ರೆಸ್-ಜೆಡಿಎಸ್ ಕೈಯಲ್ಲಿಲ್ಲ. ಅವರ ಸೋಲು- ಗೆಲುವನ್ನು ಜನರು ನಿರ್ಧರಿಸುತ್ತಾರೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ‌

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನರ ತೀರ್ಮಾನ ಬಿಜೆಪಿ ಪರವಾಗಿ ಇರುತ್ತದೆ. ಕೆಲ ಕ್ಷೇತ್ರಗಳಲ್ಲಿ ಬಂಡಾಯ ಇದೆ. ಬಂಡಾಯ ಎಲ್ಲ ಪಕ್ಷಗಳು ಇದ್ದೇ ಇರುತ್ತದೆ. ಆದರೆ ಅದು ಕ್ಷಣಿಕ ಮಾತ್ರ. ಅದರಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ ಎಂದರು.

ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ.‌ ಎಲ್ಲರೂ ಸೇರಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ.‌ ಕುಮಾರಸ್ವಾಮಿ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರ ಬಗ್ಗೆ ಅವರನ್ನೇ ಕೇಳಬೇಕು ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು