ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಯಲ್ಲಿ ಜನ ಸೇವಕ ಸಮಾವೇಶ ಜ 11ಕ್ಕೆ

;
Last Updated 9 ಜನವರಿ 2021, 17:12 IST
ಅಕ್ಷರ ಗಾತ್ರ

ಕಲಬುರ್ಗಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿರುವ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಭಿನಂದನೆ ಸಲ್ಲಿಸಲು ಮತ್ತು ಮುಂದಿನ ಚುನಾವಣೆಗಳಿಗೆ ಕಾರ್ಯಕರ್ತರನ್ನು ಹುರಿದುಂಬಿಸಲು ಇದೇ 11ರಂದು ಮಧ್ಯಾಹ್ನ 3ಕ್ಕೆ ನಗರದ ಎನ್‍.ವಿ. ಕಾಲೇಜಿನ ಆವರಣದಲ್ಲಿ ಜನಸೇವಕ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಡಾ.ಸಂದೀಪಕುಮಾರ ಕೆ.ಸಿ. ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬಲವನ್ನು ವೃದ್ಧಿಸಿರುವ ಗ್ರಾ.ಪಂ. ಸದಸ್ಯರು ಜನ ಸೇವಕರಾಗಿದ್ದು, ಅವರ ಸಮಾವೇಶ ನಡೆಸುವ ಮೂಲಕ ಅವರಿಗೆ ಗೌರವಿಸ ಲಾಗುವುದು. ಅಲ್ಲದೇ ಪಕ್ಷವನ್ನು ಬೇರು ಮಟ್ಟದಲ್ಲಿ ಇನ್ನಷ್ಟು ಬಲಗೊಳಿಸಲು ಸಂದೇಶ ರವಾನಿಸಲು ಸಮಾವೇಶವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಐದು ತಂಡಗಳನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ ಕಟೀಲ್ ಅವರು ರಚಿಸಿದ್ದಾರೆ ಎಂದು ತಿಳಿಸಿದರು.

ನಗರದ ಎನ್‍.ವಿ ಕಾಲೇಜಿನ ಆವರಣದಲ್ಲಿ ನಡೆಯುವ ಸಮಾವೇಶವನ್ನು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಉದ್ಘಾಟಿಸಲಿದ್ದಾರೆ. ತಂಡದ ಪ್ರಮುಖರಾದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಪಕ್ಷದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಈ ಭಾಗದ ಶಾಸಕರು, ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದರು.

11ರಿಂದ 13ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನ ಸೇವಕ ಸಮಾವೇಶ ನಡೆಯಲಿವೆ. ನಳಿನ್ ಕುಮಾರ ಕಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದೇ 11ರಂದು ಮೈಸೂರಿನಲ್ಲಿ ಉದ್ಘಾಟಿಸುವರು.

ಪ್ರತಿ ಸಮಾವೇಶದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು, ಕಾರ್ಯಕರ್ತರು ಸೇರಿದಂತೆ 4 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಗ್ರಾಮೀಣ ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರವೀಣ ತೆಗನೂರ, ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ದೇಸಾಯಿ, ಉಪಾಧ್ಯಕ್ಷರಾದ ವಿನಯ ವಲ್ಲಾಪುರೆ, ನಗರ ಪ್ರಧಾನ ಕಾರ್ಯದರ್ಶಿ ಸೂರಜ್ ತಿವಾರಿ, ಉಮೇಶ ಪಾಟೀಲ, ಮಹಾದೇವ ಬೆಳಮಗಿ, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಅಶೋಕ ಬಗಲಿ, ಶಿವಾ ಅಷ್ಠಗಿ,
ಅರುಣ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT