ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

23ರಂದು ಸಿಎಂ ಜನಸ್ಪಂದನ

Published : 5 ಸೆಪ್ಟೆಂಬರ್ 2024, 16:35 IST
Last Updated : 5 ಸೆಪ್ಟೆಂಬರ್ 2024, 16:35 IST
ಫಾಲೋ ಮಾಡಿ
Comments

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 23ರಂದು ಕಲಬುರಗಿಯಲ್ಲಿ ವಿಭಾಗೀಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜನಸ್ಪಂದನ ಹಿನ್ನೆಲೆಯಲ್ಲಿ ಅಗತ್ಯ ಹಾಗೂ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಹೆಚ್ಚುವರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಇಲಾಖೆಯ ಮುಖ್ಯಸ್ಥರು, ಕಲಬುರಗಿ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಪತ್ರ ಬರೆದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮೊಬೈಲ್ ಶೌಚಾಲಯ, ಡಸ್ಟ್ ಬಿನ್ ಹಾಗೂ ಸ್ವಚ್ಛತಾ ಸಿಬ್ಬಂದಿ ಒದಗಿಸುವಂತೆ ಮಹಾನಗರ ಪಾಲಿಕೆಗೆ ಸೂಚಿಸಿದ್ದಾರೆ. ಅಂಗವಿಕಲರು ಹಾಗೂ ಹಿರಿಯ ನಾಗರಿಕರಿಗೆ ಗಾಲಿ ಕುರ್ಚಿಗಳ ವ್ಯವಸ್ಥೆ, ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಬೇಕು. ಅರ್ಜಿದಾರರಿಗೆ, ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡುವಂತೆ ಆಹಾರ ಇಲಾಖೆಗೆ ಸೂಚಿಸಿದ್ದಾರೆ ಎಂದಿದ್ದಾರೆ.

ವೈದ್ಯಕೀಯ, ಆಂಬುಲೆನ್ಸ್ ಸೇವೆ, ಸೂಕ್ತ ಪೊಲೀಸ್ ಬಂದೋಬಸ್ತ್, ವಾಹನಗಳ ನಿಲುಗಡೆ, ಸಾರಿಗೆ, ಎಲ್ಇಡಿ ಪರದೆ, ಕುಡಿಯುವ ನೀರಿನಂತ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲು ಮತ್ತು ತಾಂತ್ರಿಕ ವಿಭಾಗದವರಿಗೆ ಮಾಕ್ ತರಬೇತಿ ನೀಡಲು ವಿಭಾಗೀಯ ಆಯುಕ್ತರಿಗೆ ಪತ್ರಮುಖೇನ ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT