ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಮ್ಸ್‌ನಲ್ಲಿ ಅತ್ಯಾಚಾರ ಯತ್ನ: ‘ಜನವಾದಿ’ ಆಕ್ರೋಶ

Last Updated 10 ಜೂನ್ 2021, 5:24 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಮ್ಸ್‌ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಮೇಲೆ ಖಾಸಗಿ ಆಂಬುಲೆನ್ಸ್ ಚಾಲಕ ಪ್ರೇಮಕುಮಾರ ಅಲಿಯಾಸ್ ಪಿಂಟು ಅತ್ಯಾಚಾರ ಯತ್ನ ನಡೆಸಿದ ಘಟನೆ ಖಂಡಿಸಿ ಜನವಾದಿ ಮಹಿಳಾ ಸಂಘಟನೆ ಕಾರ್ಯ
ಕರ್ತರು ಆಸ್ಪತ್ರೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

‘ಕೋವಿಡ್ ಸೋಂಕಿತ ಮಹಿಳೆಯ ಮೇಲೆ ನಡೆದಿರುವ ಅತ್ಯಾಚಾರದ ಪ್ರಯತ್ನ ತೀರ ಆತಂಕಕಾರಿ ಸಂಗತಿಯಾಗಿದೆ. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸುರಕ್ಷತೆ ಇಲ್ಲವೆ? ಸಿಸಿ ಟಿವಿ ಕ್ಯಾಮೆರಾ ಇಲ್ಲದಿರುವುದು ತೀರ ಅಚಾತುರ್ಯ. ಇಂಥ ದೊಡ್ಡ ಆಸ್ಪತ್ರೆಯಲ್ಲಿ, ಅದೂ ಮಹಿಳೆಯರು ಚಿಕಿತ್ಸೆಗಾಗಿ ಬರಲೇಬೇಕಾದ ಆಸ್ಪತ್ರೆ ಪರಿಸರದಲ್ಲಿ ಸುರಕ್ಷಿತ ಕ್ರಮಗಳನ್ನು ಕಲ್ಪಿಸುವಲ್ಲಿ ಆಸ್ಪತ್ರೆಯ ಆಡಳಿತ ವಿಫಲವಾದದ್ದು ಖಂಡನೀಯ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಕೆ.ನೀಲಾ ಟೀಕಿಸಿದರು.

‘ಮಹಿಳೆಯರಿಗೆ ಎಲ್ಲ ರೀತಿಯ ರಕ್ಷಣೆ ಕೊಡಬೇಕಾದ ಸರ್ಕಾರಿ ಸಂಸ್ಥೆಗಳಲ್ಲಿಯೇ ರಕ್ಷಣೆ ಕೊಡಲು ಸಾಧ್ಯವಾಗದಿದ್ದರೆ ಇನ್ನು ಉಳಿದ ಸ್ಥಳಗಳ ಗತಿಯೇನು’ ಎಂದು ಅವರು ಪ್ರಶ್ನಿಸಿದರು.

‘ಜಿಮ್ಸ್ ಆಸ್ಪತ್ರೆಯು ಅವ್ಯವಸ್ಥೆಯ ಆಗರವಾಗಿದೆ. ಅಲ್ಲಿ ಉಪಚಾರ ಪಡೆದುಕೊಳ್ಳುತ್ತಿರುವ ನಾಗರಿಕರು ಅಲ್ಲಿನ ಅವ್ಯವಸ್ಥೆ ಕುರಿತು ಹೇಳುತ್ತಲೇ ಇದ್ದಾರೆ. ಜಿಲ್ಲಾಡಳಿತ ಮಾತ್ರ ಈ ಕುರಿತು ಗಮನ ವಹಿಸುತ್ತಿಲ್ಲ ಎಂಬುದೇ ಆತಂಕ ಮೂಡಿಸುತ್ತಿದೆ. ತಕ್ಷಣವೇ ಜಿಲ್ಲಾಡಳಿತ ಈ ಕಡೆ ಗಮನ ಹರಿಸಬೇಕು. ಚಿಕಿತ್ಸೆಗಾಗಿ ಬರುತ್ತಿರುವ ಮಹಿಳೆಯರಿಗೆ ಎಲ್ಲ ಬಗೆಯ ಸುರಕ್ಷತೆ ಕಲ್ಪಿಸಬೇಕು. ಎಲ್ಲ ಕಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ಅವರು ಒತ್ತಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಅಮೀನಾ ಬೇಗಂ, ಉಪಾಧ್ಯಕ್ಷೆ ಚಂದಮ್ಮ ಗೋಳಾ, ಶಹನಾಜ್ ಅಖ್ತರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT